3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಬೀದಿಮನಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅತ್ಯಧಿಕ ಮತಗಳನ್ನು ಪಡೆದು ಜಯಗಳಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಿಶ್ವನಾಥ ಬೀದಿಮನಿ ಚಿತ್ತಾಪುರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ಉತ್ತಮ ಯೋಜನೆಗಳನ್ನು ರೂಪಿಸಿದ್ದು, ಐದು ಗ್ಯಾರಂಟಿಗಳ ಅನುಷ್ಠಾನ ರಾಜ್ಯದ ಜನರಲ್ಲಿ ಮನೆ ಮಾತಾಗಿದೆ. ಈ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಐದು ವರ್ಷಗಳ ಪೂರ್ಣಗೊಳ್ಳುವವರೆಗೆ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾಗಲಿ ಎಂಬ ಆಶಯವನ್ನು ರಾಜ್ಯದ ಜನರು ಹೊಂದಿದ್ದಾರೆ. ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಹೀಗಾಗಿ ಈ ಮೂರು ಕ್ಷೇತ್ರಗಳಲ್ಲಿನ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ, ಸಂಡೂರು ಕ್ಷೇತ್ರದಲ್ಲಿ ಇ.ಅನ್ನಪೂರ್ಣ, ಶಿಗ್ಗಾಂವಿ ಕ್ಷೇತ್ರದಲ್ಲಿ ಪಠಾಣ್ ಯಾಸಿನ್ ಅಹ್ಮದ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ.