Oplus_0

ಚಿತ್ತಾಪುರ ಬಿಜೆಪಿ ಯುವ ಮೋರ್ಚಾ ವತಿಯಿಂದ 500 ಸಸಿ ನೆಡುವ ಕಾರ್ಯಕ್ರಮಕ್ಕೆ ಸಜ್ಜನಶೆಟ್ಟಿ ಚಾಲನೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ರಾಯಪ್ಪ ಚಾಳಿ ಹತ್ತಿರ ಭಾರತೀಯ ಜನತಾ ಪಕ್ಷ ಚಿತ್ತಾಪುರ ಮಂಡಲದ ಯುವ ಮೋರ್ಚಾದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಿಜೆಪಿ ಯುವ ಮೋರ್ಚಾ ವತಿಯಿಂದ ಪಟ್ಟಣದಲ್ಲಿ 500 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಸಾರ್ವಜನಿಕರಲ್ಲಿ ಪರಿಸರದ ಅರಿವು ಮೂಡಿಸುವ ಕೆಲಸ ಕೊಡಲಾಗುತ್ತದೆ. ಸ್ವಚ್ಛ ಮತ್ತು ಸುಂದರ ಪರಿಸರ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರ ಮೇಲೆ ಜವಾಬ್ದಾರಿ ಇದೆ. ಹೀಗಾಗಿ ಎಲ್ಲರೂ ಗಿಡಮರಗಳನ್ನು ಬೆಳೆಸಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ವೀರೇಂದ್ರ ಪಾಟೀಲ್ ರಾಯಿಕೋಡ್, ತಾಲೂಕು ಯುವ ಅಧ್ಯಕ್ಷ ದೇವರಾಜ್ ತಳವಾರ, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ, ಮುಖಂಡರಾದ ಸುರೇಶ ರಾಠೋಡ, ಮಹೇಶ್ ಬಾಳಿ, ಗುಂಡು ಮತ್ತಿಮೂಡ್,  ಗಂಗಾಧರ್ ಕುಂಬಾರ, ಸಿದ್ದುಗೌಡ ಕುರಾಳ, ಸಂಗು ಪಾಟೀಲ್, ಶರಣು ಕುಲಕುಂದಿ, ಪಂಕಜ್ ಗೌಡ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!