Oplus_0

ವಿಧಾನ ಪರಿಷತ್ ಚುನಾವಣೆಗೆ ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಕೆ | ಜನರ ಆಶೋತ್ತರಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ: ಕಮಕನೂರ 

ನಾಗಾವಿ ಎಕ್ಸಪ್ರೆಸ್ 

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿರುವ ಬೆನ್ನಲ್ಲೇ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಅವರು ಸೋಮವಾರ ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಅಧಿಕೃತ ಪ್ರವೇಶ ಪಡೆದರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದರು.

ನಾಮಪತ್ರ ಸಲ್ಲಿಕೆ ಬಳಿಕ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಅವರು ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಕೃತಜ್ಞತೆ ಸಲ್ಲಿಸಿ, ಚುನಾವಣೆಯಲ್ಲಿ ಜಯಗಳಿಸಿ ಜನರ ಆಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗಾರ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ ಹೊಂದಿದ್ದು, ವಿಧಾನ ಪರಿಷತ್‌ನಲ್ಲಿ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಮೇಶ್ ನಾಟೀಕಾರ, ಶರಣಪ್ಪ ನಾಟೀಕಾರ, ಬಸವರಾಜ ನಾಟೀಕಾರ, ಬಸವರಾಜ ಹರವಾಳ ಸೇರಿದಂತೆ ಹಲವಾರು ಪ್ರಮುಖ ನಾಯಕರು ಉಪಸ್ಥಿತರಿದ್ದು ಅಭ್ಯರ್ಥಿಗೆ ಶುಭ ಕೋರಿದರು.

ಈ ವೇಳೆ ಅನೇಕ ಕಾರ್ಯಕರ್ತರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗಿ ಅಭ್ಯರ್ಥಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

Spread the love

Leave a Reply

Your email address will not be published. Required fields are marked *

error: Content is protected !!