ಸಿದ್ದಲಿಂಗ ಬಾಳಿ ಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ
ನಾಗಾವಿ ಎಕ್ಸಪ್ರೆಸ್
ಶಹಾಬಾದ: ವಿಭಿನ್ನ ಪ್ರಯೋಗಗಳ ಮೂಲಕ ಮಕ್ಕಳಲ್ಲಿ ಆಸಕ್ತಿದಾಯಕ ಕಲಿಕೆ ಮೂಡಿಸುವುದರೊಂದಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಕಾರಣರಾಗಿರುವ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರ ಅವರು ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಚೇತನ ಪ್ರತಿಷ್ಠಾನ ಧಾರವಾಡ, ಆರ್ಯಭಟ ಎಜುಕೇಷನ್ ಟ್ರಸ್ಟ್ ವತಿಯಿಂದ ಜೂನ್ 21 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಚೇತನ ಪ್ರತಿಷ್ಠಾನದ ಅಧ್ಯಕ್ಷ ಡಾ. ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ.

