ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕರವೇ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಗುರುವಾರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕರವೇ ನಾರಾಯಣ ಗೌಡ ಬಣದ ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ನೇತೃತ್ವದಲ್ಲಿ ಮುಖಂಡರು ಆಸ್ಪತ್ರೆಯಲ್ಲಿನ ಕುಂದು ಕೊರತೆಗಳ ಬಗ್ಗೆ ಮನವಿ ಸಲ್ಲಿಸಿದರು.
ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿಗೆ ಹಾಗೂ ನೀರಿನ ಸಮಸ್ಯೆಗೆ ಕ್ಷೇತ್ರದ ಶಾಸಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೂರಾರು ಕೋಟಿ ಬಜೆಟ್ ತಂದಿದ್ದಾರೆ ಆದರೆ ಅದನ್ನು ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಹಾಗೂ ಸಮಯಕ್ಕೆ ಸರಿಯಾಗಿ ವೈದ್ಯರು ಬರುವುದಿಲ್ಲ ಹಾಗಾಗಿ ಸಾರ್ವಜನಿಕರು, ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ ಮತ್ತು ಚಿತ್ತಾಪುರ ತಾಲೂಕಿನಲ್ಲಿ ನಕಲಿ ಡಾಕ್ಟರ್ ಗಳ ಹಾವಳಿ ಜಾಸ್ತಿ ಆಗಿದೆ ಇದನ್ನು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕರವೇ ಪ್ರಧಾನ ಕಾರ್ಯದರ್ಶಿ ಶೇರ್ ಅಲಿ, ಗಣೇಶ ರಾಠೋಡ, ಅರುಣ ಸಿಂಧೆ, ರಾಜೇಶ್ ಗುತ್ತೇದಾರ, ಶಿವರಾಮ ಚವ್ಹಾಣ, ಅರ್ಜುನ್ ಕಟ್ಟಿಮನಿ, ದೇವಿಂದ್ರ ಯಾಗಾಪೂರ, ನಾಗೇಶ ರಾಠೋಡ, ವಿಶ್ವರಾಧ್ಯ ನಾಲವಾರ ಸೇರಿದಂತೆ ಇತರರು ಇದ್ದರು.
