ಚಿತ್ತಾಪುರದಲ್ಲಿ ಡಿಸಿ ಇಕ್ರಮ್ ಶರೀಫ್ ಮಿಂಚಿನ ಸಂಚಾರ | ಆಸ್ಪತ್ರೆ, ಕ್ರೀಡಾಂಗಣಕ್ಕೆ ಭೇಟಿ ಪರಿಶೀಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಗುರುವಾರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ ಸುಧಾರಣೆಗಾಗಿ ಸಲಹೆಗಳನ್ನು ನೀಡಿದರು ಹಾಗೂ ಸ್ವಚ್ಛತೆಗೊಳಿಸಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ನಂತರ ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಪಟುಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸೌಲಭ್ಯಗಳನ್ನು ಒದಗಿಸಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿ ಎಂದು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಸೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಮುಖ್ಯಧಿಕಾರಿ ಭಾರತಿ ದಂಡೋತಿ, ಕ್ರೀಡಾ ಇಲಾಖೆಯ ಅಧಿಕಾರಿಗಳು, ಅರೋಗ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ನಂತರ ಸನ್ನತಿ ದೇವಸ್ಥಾನ ಮತ್ತು ಭಗವಾನ್ ಬುದ್ಧ ಹಾಗೂ ಅಶೋಕನ ಶಾಸನಗಳನ್ನು ವೀಕ್ಷಣೆ ಮಾಡಿದರು.

