Oplus_0

ಕಲಬುರಗಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ನೇಮಕ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಕಾರ್ಯದರ್ಶಿಯನ್ನಾಗಿ ಚಂದ್ರಕಾಂತ ಏರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಮಹೇಶ ಹೂಗಾರ ರವರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ ಪ್ರಯುಕ್ತ ಜಿಲ್ಲಾ ಕಾರ್ಯದರ್ಶಿ ಸ್ಥಾನ ತೆರವಾದ ಕಾರಣ, ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರವರ ಅನುಮೋದನೆ ಪಡೆದುಕೊಂಡು ಆರೋಗ್ಯ ಇಲಾಖೆಯ ನಿರ್ದೇಶಕ ಚಂದ್ರಕಾಂತ ಏರಿ ರವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಳಿಸಿ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೇಮಕ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು ಎಂದು ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ ರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!