Oplus_0

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ | ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಡಿವೈಎಸ್ಪಿ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಮಾದಕ ದ್ರವ್ಯಗಳ ವ್ಯಸನದಿಂದ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹೀಗಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು.

ಪಟ್ಟಣದ ಹೊರವಲಯದ ನಾಗಾವಿ ಕ್ಯಾಂಪಸ್ ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ ಇದೇ ದೊಡ್ಡ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ತಿಳಿಸಿದರು.

ಸಿಪಿಐ ಸಿದ್ದಬಸನಗೌಡ ಪಾಟೀಲ, ಎಎಸ್ಐ ವಿಠ್ಠಲ್ ಬಿರಾದಾರ, ಸಿಬ್ಬಂದಿಗಳಾದ ದತ್ತು ಜಾನೆ, ಅಜರುದ್ದೀನ್, ಅಯ್ಯಣ್ಣ, ಅನಿಲ್ ಹಾಜರಿದ್ದು, ಚಿತ್ತಾಪುರ ಪಟ್ಟಣದ ಶಾಲಾ- ಕಾಲೇಜುಗಳಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಪ್ರಯುಕ್ತ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು ಹಾಗೂ ಮಕ್ಕಳೊಂದಿಗೆ ಮಾದಕ ವಸ್ತುಗಳ ಕುರಿತು ಜಾಗೃತಿ ಅರಿವು ಹಾಗೂ ಅದನ್ನು ತಡೆಗಟ್ಟುವುದು ಹೇಗೆ ಎಂಬುದರ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಅವರಲ್ಲಿ ಅರಿವು ಮೂಡಿಸಲಾಯಿತು.

Spread the love

Leave a Reply

Your email address will not be published. Required fields are marked *

You missed

error: Content is protected !!