ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ರೇವವಣಸಿದ್ಧ ಅರಣಕಲ್
ನಾಗಾವಿ ಎಕ್ಸಪ್ರೆಸ್
ಕಾಳಗಿ: ಕುರುಬ ಸಮಾಜದ ಶೇ.90 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕುರುಬ ಗೊಂಡ ಸಮಾಜದ ತಾಲೂಕು ಅಧ್ಯಕ್ಷ ರೇವವಣಸಿದ್ಧ ಅರಣಕಲ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಪ್ರದೇಶ ಕುರುಬ ಗೊಂಡ ನೌಕರರ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ ಹಾಗೂ ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜು. 12 ರಂದು ಪಂಡಿತ್ ರಂಗ ಮಂದಿರದಲ್ಲಿ ಕುರುಬ ಸಮಾಜದ 2025-26 ನೇ ಸಾಲಿನ ಎಸ್ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜು.5 ಒಳಗಾಗಿ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ. ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕುರುಬ ಗೊಂಡ ಸರ್ಕಾರಿ ನೌಕರ ಸಂಘದ ಕಾಳಗಿ ತಾಲೂಕ ಅಧ್ಯಕ್ಷ ಮಲ್ಲಿಕಾರ್ಜುನ್ ಪೂಜಾರಿ (9902560390) ವಿಶ್ವ ಸಾಲಹಳ್ಳಿ (9844397097) ಅವರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಈ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಯತಿಂದ್ರ ಸಿದ್ದರಾಮಯ್ಯ. ಶರಣಪ್ರಕಾಶ ಪಾಟೀಲ ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೊಂಡ ಕುರುಬ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಅರಣಕಲ್, ಕಾರ್ಯಾಧ್ಯಕ್ಷ ಹಣಮಂತ ಬೆಂಕಿ, ಕುರುಬ ಸಮಾಜದ ಯುವ ನಾಯಕ ವಿಶ್ವ ಪೂಜಾರಿ, ಚಂದ್ರಶೇಖರ್ ಪಾಟೀಲ, ಬಸವರಾಜ ಪೂಜಾರಿ ಇದ್ದರು.

