ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೆಂಗಳೂರುನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ, ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಯಘೋಷಗಳ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಸರ್ವೋಚ್ಛ ನ್ಯಾಯಾಲದಯದ ತೀರ್ಪಿನಂತೆ ಕೂಡಲೇ ಸುಗ್ರಿವಾಜ್ಞೆ ಮೂಲಕ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಮತ್ತು ವಿವಿಧ ಇಲಾಖೆಯ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿಯುವುದರ ಮೂಲಕ ಮಾದಿಗ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಜೆ ಸಿ ಪ್ರಕಾಶ್, ಕೋಡಿಹಳ್ಳಿ ನಾಗರಾಜ್, ಅಯ್ಯಪ್ಪ ರಾಮತೀರ್ಥ, ರಂಗಸ್ವಾಮಿ, ವೀರಣ್ಣ, ಮಹಿಳಾ ಮುಖಂಡರಾದ ಯಶಸ್ವಿ, ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.