ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಅದ್ದೂರಿ ಸ್ವಾಗತ ನಾಳೆ ಪೂರ್ವಸಿದ್ದತಾ ಸಭೆ: ಗುತ್ತೇದಾರ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಗೃಹ ಮತ್ತು ಐಟಿಬಿಟಿ ಹಾಗೂ ಇ-ಆಡಳಿತ ಸಚಿವರಾಗಿ ಹಾಗೂ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಪ್ರಿಯಾಂಕ್ ಖರ್ಗೆಯವರು ಕಲಬುರಗಿ ನಗರಕ್ಕೆ ಜು.6 ರಂದು ರಂದು ಆಗಮಿಸುತ್ತಿರುವ ಕಾರಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅದ್ದೂರಿಯಾಗಿ ಸ್ವಾಗತ ಮಾಡಿ ಸನ್ಮಾನ ಮಾಡುವ ಪ್ರಯುಕ್ತ ಜು.4 ರಂದು ಸಾಯಂಕಾಲ 4 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಈ ಪೂರ್ವಸಿದ್ದತಾ ಸಭೆಗೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು. ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಕೋರಿದ್ದಾರೆ.

