ಚಿತ್ತಾಪುರದಲ್ಲಿ ಹಾಡುಹಗಲೇ ಬೀಗ ಹಾಕಿದ ಮನೆಗೆ ಕನ್ನ ₹7.28 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಶನಿವಾರ ಬೀಗ ಹಾಕಿದ್ದ ಮನೆಯೊಂದರ ಬೀಗ ಮುರಿದು ಸುಮಾರು 7,28,000 ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಹಾಡುಹಗಲೇ ಮನೆಯೊಂದರ ಕಳ್ಳತನ ನಡೆದಿರುವುದು ಪಟ್ಟಣದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ.

ಆಶ್ರಯ ಕಾಲೋನಿಯ ನಿವಾಸಿ, ಓರಿಯಂಟ್ ಸಿಮೆಂಟ್ ಕಂಪನಿ ಉದ್ಯೋಗಿ ಸತೀಶ್ ಹರಳಕಟ್ಟೆ ಎಂಬುವವರ ಮನೆಯಲ್ಲಿ ಈ ಕಳವು ನಡೆದಿದೆ. ಜುಲೈ 4ರಂದು ಮಧ್ಯಾಹ್ನ 1.30ರ ಸುಮಾರಿಗೆ ಸತೀಶ್ ಅವರು ತಮ್ಮ ಪತ್ನಿಯ ಪರೀಕ್ಷೆಗಾಗಿ ಮನೆಗೆ ಬೀಗ ಹಾಕಿ ಭಂಕೂರ ಕ್ಕೆ ಹೋಗಿದ್ದರು. ಸಂಜೆ 6.30ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಹಾಗೂ ಅಲ್ಮೇರಾ ಒಡೆದಿರುವುದು ಕಂಡುಬಂದಿದೆ.

ಅಲ್ಮೇರಾದಲ್ಲಿದ್ದ 50 ಗ್ರಾಂ ಚಿನ್ನದ ಪಟ್ಲಿ, 30 ಗ್ರಾಂ ಮಂಗಳಸೂತ್ರ ಸೇರಿದಂತೆ ಒಟ್ಟು 136.5 ಗ್ರಾಂ ಚಿನ್ನಾಭರಣಗಳು, ಬೆಳ್ಳಿಯ ಕಾಲುಂಗುರ, ಉಡುದಾರ, ಕಡಗ ಮತ್ತು ₹35,000 ನಗದು ಹಣ ಸೇರಿದಂತೆ ಒಟ್ಟು ₹7.28 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ಐ ಮಂಜುನಾಥ ರೆಡ್ಡಿ ಹಾಗೂ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಸತೀಶ್ ಹರಳಕಟ್ಟಿ ಅವರು ನೀಡಿದ ದೂರಿನನ್ವಯ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 102/2026, ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!