ಜಗಜೀವನ್ ರಾಮ್ ಪುಣ್ಯಸ್ಮರಣೆ | ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗೌರವ ಸಮರ್ಪಣೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿಯಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು.
ನಂತರ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್ ಸಿ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ, ಪ್ರವೀಣ್ ಹರವಾಳ, ಡಾ ಕಿರಣ್ ದೇಶಮುಖ್ ಸೇರಿದಂತೆ ಮತ್ತಿತರರಿದ್ದರು.

