Oplus_0

ಡೋಣಗಾಂವ ಗ್ರಾಮಕ್ಕೆ ಶುದ್ಧವಾದ ಕುಡಿಯುವ ನೀರು ಪೂರೈಕೆಗೆ ಬೆಣ್ಣೂರಕರ್ ಆಗ್ರಹ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮಕ್ಕೆ ಪೂರೈಕೆ ಆಗುತ್ತಿರುವ ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ರೋಗರುಜಿನಗಳಿಗೆ ತುತ್ತಾಗುವ ಸಾಧ್ಯತೆಯಿದೆ ಹೀಗಾಗಿ ತಕ್ಷಣ ಶುದ್ಧ ನೀರು ಪೂರೈಕೆ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್ ಆಗ್ರಹಿಸಿದ್ದಾರೆ.

ಮಂಗಳವಾರ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಅವರು, ಸೇಡಂ ತಾಲೂಕಿನ ಶ್ರೀ ಸಿಮೆಂಟ್ ಕಂಪನಿಯ ಗಣಿಗಾರಿಕೆ ಮತ್ತು ಕಲ್ಲು ಸ್ಫೋಟನೆಯಿಂದಾಗಿ, ರಾಸಾಯನಿಕ ಮಿಶ್ರಿತ ಕಲುಷಿತ ನೀರು ಗ್ರಾಮದ ಬೋರ್‌ವೆಲ್‌ಗಳಿಗೆ ಸೇರುತ್ತಿದೆ. ಇದೇ ಕಲುಷಿತ ನೀರನ್ನು ಕುಡಿಯುವುದರಿಂದ ಡೋಣಗಾಂವ ಗ್ರಾಮದ ನಾಗರಿಕರ ಆರೋಗ್ಯದಲ್ಲಿ ತೀವ್ರ ಏರುಪೇರಾಗುತ್ತಿದ್ದು, ಸಾರ್ವಜನಿಕರು ತೊಂದರೆಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.

ತಕ್ಷಣವೇ ಈಕಡೆ ಗಮನ ಹರಿಸಿ, ಗ್ರಾಮಸ್ಥರ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಮತ್ತು ಶುದ್ಧ ಕುಡಿಯುವ ನೀರನ್ನು ಪೂರೈಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!