ದಂಡೋತಿ ವಸತಿ ಶಾಲೆಯ ಮಕ್ಕಳು ಅಸ್ವಸ್ಥ, ತಪ್ಪಿತಸ್ಥರ ವಿರುದ್ಧ ಕ್ರಮ: ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತದೊಂದಿಗೆ ಮಾತನಾಡಿ ಮಾಹಿತಿ ಪಡೆಯಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ರಾತ್ರಿ ತಯಾರಿಸಿದ ಅನ್ನವು ಪೂರ್ಣವಾಗಿ ಬೆಂದಿರದ ಕಾರಣ, ಊಟ ಮಾಡಿದ ಮಕ್ಕಳಲ್ಲಿ ಅಜೀರ್ಣದ ಸಮಸ್ಯೆ ಉಂಟಾಗಿರುವುದಾಗಿ ತಿಳಿದುಬಂದಿದೆ, ಈ ಬಗ್ಗೆ ಹೆಚ್ಚಿನ ಮಾಹಿತಿಯ ವರದಿ ಬಂದ ನಂತರ ನಿರ್ಲಕ್ಷ್ಯ ವಹಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಹಾಸ್ಟೆಲ್ ಗಳ ಆಹಾರ ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಗಂಭೀರವಾಗಿ ಪರಿಗಣಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ, ವಿದ್ಯಾರ್ಥಿಗಳ ವಿಷಯದಲ್ಲಿ ಯಾವುದೇ ಲೋಪಗಳು ಆಗದಂತೆ ನೋಡಿಕೊಳ್ಳುವುದು ಆದ್ಯತೆಯಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.
