ನಾಲವಾರದಲ್ಲಿ ಜು.14 ರಂದು ತನಾರತಿ ವೈಭವ‌ | ಆರಾಧ್ಯ ಗುರುವಿಗೆ ಹರಕೆ ಅರ್ಪಿಸಲ್ಲಿರುವ ಭಕ್ತಸಾಗರ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ನಾಲವಾರ ದಲ್ಲಿ ತಮ್ಮ ಹರಕೆಗಳನ್ನು ಪೂರೈಸಿದರೆ ಪ್ರತೀಕವಾಗಿ ನೆರವೇರುವ ತನಾರತಿ ಸೇವೆಯನ್ನು ಆರಾಧ್ಯ ಸದ್ಗುರುವಿಗೆ ಸಲ್ಲಿಸುವ ವಿಶಿಷ್ಟ ಉತ್ಸವ ಮಂಗಳವಾರ ಮಧ್ಯರಾತ್ರಿ ಸಂಭ್ರಮದಿಂದ ನಡೆಯಲಿದೆ.

ಶ್ರೀ ಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಸಿದ್ದ ತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ವೈಭವದಿಂದ ಶ್ರದ್ಧೆ ಭಕ್ತಿಯ ಮಧ್ಯೆ ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವಕ್ಕೆ ಸಹಸ್ರ ಸಹಸ್ರ ಭಕ್ತರ ಮಧ್ಯೆ ಜು.  14ರಂದು ಮಣ್ಣೆತ್ತಿನ ಅಮಾವಾಸ್ಯೆಯ ದಿನವಾದ ವರ್ಷದ ಕೊನೆಯ ತನಾರತಿ ಉತ್ಸವ ಮಂಗಳವಾರ ಮಧ್ಯರಾತ್ರಿ ಭಕ್ತಿ ಭಾವದಿಂದ ನೆರವೇರಲಿದೆ.

ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆಯ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರ ರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಹರಕೆ ಅರ್ಪಿಸಲಿದ್ದಾರೆ.

ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಸನ್ನಿಧಿಯಲ್ಲಿ ವರ್ಷದ ಕೊನೆಯ ತನಾರತಿ ಉತ್ಸವವು ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಅತ್ಯಂತ ವೈಭವದಿಂದ ನಡೆಯಲಿದೆ.

ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಶ್ರೀಮಠದ ಪಾರಂಪರಿಕ ವಿಶೇಷ ಉಡುಪು ಧರಿಸಿ, ಪುಷ್ಪಾಲಂಕೃತವಾಗಿ, ತನಾರತಿ ಉತ್ಸವದ ನೇತೃತ್ವ ವಹಿಸಿದ್ದರು. ಅವರ ಹಿಂದೆ ಸಾವಿರಾರು ಸದ್ಭಕ್ತರು ವಿಶೇಷವಾಗಿ ತಯಾರಿಸಿದ ಹಣತೆಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮಠದ ಸುತ್ತಲೂ ಐದು ಸುತ್ತು ಪ್ರದಕ್ಷಿಣೆ ಹಾಕುವರು. ಪುರವಂತಿಕೆ, ಪೂರ್ಣಕುಂಭ, ಭಾಜಾ-ಭಜಂತ್ರಿ, ವೈದಿಕರ ವೇದಘೋಷಗಳ ಮಧ್ಯೆ ಆಂಧ್ರಪ್ರದೇಶ್ ಗದ್ವಾಲ್ ಮಂಗಳ ವಾದನದ ನಡೆದ ಈ ಉತ್ಸವ ಮಂಗಳವಾರ ಮಧ್ಯರಾತ್ರಿ ಪ್ರಾರಂಭವಾಗಿ ಬುಧುವಾರ ಬೆಳಗಿನ ಜಾವದ ವರೆಗೂ ನಡೆಯಿತು.

ಭಕ್ತರು ಬೇಡಿಕೊಂಡ ಇಷ್ಟಾರ್ಥಗಳು ಈಡೇರಿದ ನಂತರ ತನಾರತಿ ಹರಕೆಯನ್ನು ಸಲ್ಲಿಸುವ ಪರಂಪರೆ ಕಳೆದ ಮೂರು ಶತಮಾನಗಳಿಂದಲೂ ಶ್ರೀಮಠದಲ್ಲಿ ನಡೆಯುತ್ತಾ ಬಂದಿದ್ದು ನಾಲವಾರ ಶ್ರೀಮಠದ ಪಾರಂಪರಿಕ ಉತ್ಸವವಾಗಿದೆ. ತನಾರತಿ ಸಂದರ್ಭದಲ್ಲಿ ದೀಪಗಳ ಸಾಲು ನದಿಯ ರೀತಿ ಹರಿಯುವ ದೃಶ್ಯ ಕಣ್ಮನ ಸೆಳೆಯುತ್ತದೆ. ಈ ರೀತಿಯ ವೈಶಿಷ್ಟ್ಯ ಪೂರ್ಣ ಉತ್ಸವ ನಾಡಿನ ಯಾವುದೇ ಭಾಗದಲ್ಲಿ ಕಾಣಸಿಗುವುದಿಲ್ಲ.

ನಾಲವಾರದ ತನಾರತಿ ಉತ್ಸವ ಮಹತ್ವದ್ದಾಗಿದ್ದು, ಜಾತಿ ಮತ ಪಂಥಗಳನ್ನು ಮರೆತು ಸಹಸ್ರಾರು ಭಕ್ತರು ಹರಕೆಯನ್ನು ಸಮರ್ಪಿಸುವ ದೃಶ್ಯ ನಯನಮನೋಹರ ಮಾತ್ರವಲ್ಲದೇ ಆಸ್ತಿಕ ಮನಸ್ಸುಗಳನ್ನು ಭಕ್ತಿಭಾವದಲ್ಲಿ ತೇಲಾಡುವಂತೆ ಮಾಡುತ್ತದೆ. ಎಂದು ಶ್ರೀಮಠದ ವಕ್ತಾರ ಮಹದೇವ ಗಂವಾರ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!