Oplus_0

ಕುಂಬಾರ ಮಹಾಸಭಾ ನೂತನ ಪದಾಧಿಕಾರಿಗಳ ಆಯ್ಕೆ | ಕುಂಬಾರ ಸಮಾಜದ ಸಂಘಟನೆಗೆ ಎಲ್ಲರೂ ಒಗ್ಗೂಡಿ: ವಿಶ್ವನಾಥ ಕುಂಬಾರ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಹಿಂದುಳಿದ ಕುಂಬಾರ ಸಮಾಜದ ಸಂಘಟನೆಗೆ ಎಲ್ಲರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗೂಡುವುದು ಅವಶ್ಯಕ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ವಿಶ್ವನಾಥ ಕುಂಬಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಅಖಿಲ ಭಾರತ ಕುಂಬಾರರ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕುಂಬಾರ ಸಮುದಾಯದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಇರುವ ಕುಂಬಾರ ಬಾಂಧವರನ್ನು ಒಗ್ಗೂಡಿಸಿ, ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು.

ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಜಗದೇವ ಕುಂಬಾರ  ಮಾತನಾಡಿ, ಸಮುದಾಯದ ಹಕ್ಕುಗಳು ಮತ್ತು ಸೌಲಭ್ಯಗಳಿಗಾಗಿ ನಾವು ಸಂಘಟಿತವಾಗಿ ಹೋರಾಡಬೇಕಿದೆ. ಮುಂಬರುವ ದಿನಗಳಲ್ಲಿ ತಾಲೂಕಿನಲ್ಲಿ ಅತ್ಯಂತ ಅದ್ದೂರಿಯಾಗಿ ಕುಂಬಾರ ಸಮಾವೇಶವನ್ನು ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಹಳ್ಳಿ ಹಳ್ಳಿಗಳಲ್ಲಿ ಸಂಘಟನೆಯನ್ನು ವ್ಯವಸ್ಥಿತವಾಗಿ ಕಟ್ಟುವ ಕೆಲಸವನ್ನು ಎಲ್ಲರೂ ಒಟ್ಟಾಗಿ ಮಾಡಬೇಕು ಎಂದು ಕರೆ ನೀಡಿದರು.

ನೂತನ ಪದಾಧಿಕಾರಿಗಳ ಆಯ್ಕೆ:

ಇದೇ ಸಂದರ್ಭದಲ್ಲಿ ಅಖಿಲ ಭಾರತ ಕುಂಬಾರರ ಮಹಾಸಭಾ ತಾಲೂಕು ಸಂಘಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ ಜರುಗಿತು. ಸಂಘದ ನೂತನ ಉಪಾಧ್ಯಕ್ಷರಾಗಿ ರಾಜಶೇಖರ್ ಕುಂಬಾರ ಮಲಕೂಡ, ಕಾರ್ಯದರ್ಶಿಯಾಗಿ ಕಾಶಿನಾಥ್ ಕುಂಬಾರ್ ಬೆಣ್ಣೂರ (ಬಿ), ಸದಸ್ಯರಾಗಿ ಮಲ್ಲಿಕಾರ್ಜುನ ಕುಂಬಾರ ಅಲ್ಲೂರ (ಬಿ) ಹಾಗೂ ಯುವ ಘಟಕದ ತಾಲೂಕು ಅಧ್ಯಕ್ಷರಾಗಿ ಭೀಮು ಕುಂಬಾರ ಇಟಗಿ ಅವರು ಅಧಿಕಾರ ವಹಿಸಿಕೊಂಡರು. ನೂತನ ಪದಾಧಿಕಾರಿಗಳಿಗೆ ಸಂಘದ ತಾಲೂಕು ಅಧ್ಯಕ್ಷ ವಿಶ್ವನಾಥ ಕುಂಬಾರ ಅವರು ಶಾಲು ಹೊದಿಸಿ, ಸನ್ಮಾನಿಸಿ ಗೌರವಿಸಿದರು.

ಸಭೆಯಲ್ಲಿ ಸಮುದಾಯದ ಮುಖಂಡರಾದ ಶ್ರೀಮಂತ ಕುಂಬಾರ, ಮಹಾದೇವ ಕುಂಬಾರ, ಬಸವರಾಜ ಕುಂಬಾರ, ಶರಣಪ್ಪ ಕುಂಬಾರ, ಜಗದೀಶ್ ಕುಂಬಾರ, ಮಲ್ಲಿಕಾರ್ಜುನ ಕುಂಬಾರ ಚಿತ್ತಾಪೂರ, ಸಿದ್ದು ಕುಂಬಾರ, ಸುಭಾಷ್ ಕುಂಬಾರ, ರೇವಣಸಿದ್ದಪ್ಪ ಕುಂಬಾರ ಮಲಕೂಡ, ಚಿತ್ರಶೇಖರ ಕುಂಬಾರ, ಜಗನ್ನಾಥ ಕುಂಬಾರ, ಗುರುಪಾದಪ್ಪ ಕುಂಬಾರ ಸೇರಿದಂತೆ ಸಮುದಾಯದ ನೂರಾರು ಬಂಧುಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!