Oplus_0

ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ | ಎಸ್ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಿ: ಉಮಾಶ್ರೀ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಜಿಲ್ಲಾ ಎಸ್ಐಆರ್ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಸಂಜೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅವರು, ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವಲ್ಲಿ ಮತ್ತು ಅವರಿಗೆ ಅಗತ್ಯ ಮಾಹಿತಿ ಒದಗಿಸುವಲ್ಲಿ ಕಾರ್ಯಕರ್ತರು ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.

ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಮ್ಮ ಕಾರ್ಯಕರ್ತರು ಸೇತುವೆಯಾಗಿ ಕೆಲಸ ಮಾಡಬೇಕು. ಹೊಸ ಮತದಾರರನ್ನು ನೋಂದಾಯಿಸಿಕೊಳ್ಳಲು ಮತ್ತು ಹಳೆಯ ಪಟ್ಟಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ನೆರವು ನೀಡಬೇಕು ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಎಂಎಲ್ಸಿ ಜಗದೇವ ಗುತ್ತೇದಾರ ಮಾತನಾಡಿ, ಎಸ್ಐಆರ್  ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು. ಜನರಲ್ಲಿ ಇರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಯಾರೂ ಮತದ ಹಕ್ಕಿನಿಂದ ವಂಚಿತರಾಗದಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು ಎಂದರು.

ಪುರಸಭೆಯ ಮಾಜಿ ಅಧ್ಯಕ್ಷೆ ಶೀಲಾ ಕಾಶಿ, ಉಮಾಶ್ರೀ ಅವರ ಮಾರ್ಗದರ್ಶನದಂತೆ, ಪಕ್ಷದ ಸಂಘಟನೆಯನ್ನು ಬಲಪಡಿಸುತ್ತೇವೆ. ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವುದರ ಜೊತೆಗೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಕಾರ್ಯಕರ್ತರು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಪಟೇಲ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಮಾಜಿ ಉಪಾಧ್ಯಕ್ಷ ರಸೂಲ್ ಮುಸ್ತಫಾ ಯುವ ಕಾಂಗ್ರೆಸ್ ಅಧ್ಯಕ್ಷ ದೇವಿಂದ್ರ ಯಾಬಾಳ, ರಾಮಲಿಂಗ ಬಾನರ್, ಹಣಮಂತ ಸಂಕನೂರ, ನಾಗಯ್ಯ ಗುತ್ತೇದಾರ, ಅಹ್ಮದ್ ಸೇಠ್, ಶಿವಕಾಂತ ಬೆಣ್ಣೂರಕರ್, ಖಾಸಿಂ ಎಟುಜಡ್, ನಯಿಮ್, ಜಫಾರುಲ್ ಹಸನ್, ಶೇಖ್ ಬಬ್ಲು, ಖಾಜಾ ಬಾದಲ್, ಶರಣಪ್ಪ ಕೋರವಾರ, ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಆನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!