Oplus_0

ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಚಿತ್ತಾಪುರದಲ್ಲಿ ಬಂಜಾರ ಸಮಾಜದ ವತಿಯಿಂದ ಸಂಭ್ರಮ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಲಂಬಾಣಿ ಸಮುದಾಯದ ಏಕೈಕ ಶಾಸಕರಾಗಿದ್ದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿದ ಕಾರಣ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಬಂಜಾರ ಸಮಾಜದ ವತಿಯಿಂದ ಮಂಗಳವಾರ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ವೇಳೆ ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಡಿ ಚವ್ಹಾಣ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿ ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಉಪಸಭಾಪತಿ ಸ್ಥಾನ ಕೊಟ್ಟಿದ್ದರು. ಈಗ ಡಿ.ಕೆ ಶಿವಕುಮಾರ್ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡುವ ಮೂಲಕ ಬಂಜಾರ ಸಮಾಜಕ್ಕೆ ನ್ಯಾಯ ಒದಗಿಸಿ ಕೊಟ್ಟ ಕರ್ನಾಟಕ ಸರ್ಕಾರಕ್ಕೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧೀಜಿ, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಬಂಜಾರ ಸಮಾಜದ ಪರವಾಗಿ ಕೃತಜ್ಞತೆಗಳು ಸಲ್ಲಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಂಜಾರ ಸಮಾಜದ ಮುಖಂಡರಾದ ಕಿಶನ್ ನಾಯಕ, ಲಕ್ಷ್ಮಣ್ ನಾಯಕ, ಕಿರಣ್ ನಾಯಕ, ಕಿಶನ್ ಚವ್ಹಾಣ, ಕುಮಾರ್ ಜಾಧವ ಸೇರಿದಂತೆ ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!