ನೂತನ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಹಾಲಿ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ 4 ಬಾರಿ ಆಯ್ಕೆಯಾದ ಭಗೀರಥ ಉಪ್ಪಾರ ಸಮಾಜದ ಏಕೈಕ ಶಾಸಕರಾದ ಪುಟ್ಟರಂಗಶೆಟ್ಟಿ ರವರು ಆಗಸ್ಟ್ 3 ರಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಅವರಿಗೆ ಯಾದಗಿರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂಧರ್ಭದಲ್ಲಿ ಸಮಾಜದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಚಿವರನ್ನು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ಇದಕ್ಕೆ ಸಚಿವರು ಅತ್ಯಂತ ಹರ್ಷದಿಂದ ಖಂಡಿತವಾಗಿ ಭೇಟಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಬನ್ನಪ್ಪ ಹುಲಿಬೆಟ್ಟ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ದಳಪತಿ ಶೆಟ್ಟಿಕೇರಾ, ಸಮಾಜದ ಮುಖಂಡರಾದ ರಾಮಲಿಂಗ ಯರಗೋಳ, ಡಾ.ಆಂಜನೇಯ ಮಾವಿನಹಳ್ಳಿ ಕಡೇಚೂರು, ಸತೀಶ ಕಟ್ಟಿಮನಿ, ನವೀನ ಮಾವಿನಹಳ್ಳಿ ಇದ್ದರು.

