ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ | ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ಶಾಸಕ ಮತ್ತಿಮೂಡ್ ಕರೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ‘ಹರ್ ಘರ್ ತಿರಂಗಾ’ ಸಂಕಲ್ಪವನ್ನು ಯಶಸ್ವಿಗೊಳಿಸಬೇಕು ಎಂದು ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಬಸವರಾಜ ಮತ್ತಿಮೂಡ್ ಕಾರ್ಯಕರ್ತರಿಗೆ ಕರೆ ನೀಡಿದರು.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಏಕತೆ ಮತ್ತು ಅಖಂಡತೆಗೆ ನಮ್ಮ ಅಮೂಲ್ಯ ಕೊಡುಗೆ ನೀಡೋಣ ಎಂದು ಹೇಳಿದರು.
ನಮ್ಮ ರಾಷ್ಟ್ರಧ್ವಜದ ಗೌರವವನ್ನು ಕಾಪಾಡುತ್ತಾ, ನಿಯಮಾನುಸಾರ ತ್ರಿವರ್ಣ ಧ್ವಜವನ್ನು ಹಾರಿಸಿ, ದೇಶದ ಬಗ್ಗೆ ಹೆಮ್ಮೆ ಹಾಗೂ ರಾಷ್ಟ್ರಭಕ್ತಿಯ ಭಾವನೆಯನ್ನು ಮುಂದಿನ ಪೀಳಿಗೆಗೂ ಬೆಳೆಸೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ಯಾದಗಿರಿ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರ ಮಹೇಶ್ ರೆಡ್ಡಿ ಮುದ್ನಾಳ, ಸಿದ್ದಣಗೌಡ ವಡಗೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರುಕುಂದಾ, ಮೇಲಪ್ಪ ಗುಳಗಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ವಡಿಗೇರಾ, ನಗರ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ದೊಡ್ಡಮನಿ, ಮಲ್ಲಿಕಾರ್ಜುನ ಕಟ್ಟಿಮನಿ, ಶಿವಕುಮಾರ ಕೊಂಕಲ್, ನಾಗರೆಡ್ಡಿ ಇಬ್ರಾಹಿಂಪುರ, ಲಕ್ಷ್ಮಿಪುತ್ರ ಮಾಲಿಪಾಟೀಲ್ ಚಂದ್ರಶೇಖರ್ ಕಡೆಸೂರ, ಹನುಮಂತ್ ವಲ್ಯಾಪುರ್ ಶಿವಣ್ಣ ವಿಶ್ವಕರ್ಮ ,ಮೌನೇಶ್ ಬೆಳಗೇರ, ಮಲ್ಲಿಕಾರ್ಜುನ್ ಹೊನ್ನಗೆರಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುನೀತಾ ಚವ್ಹಾಣ್, ನಗರ ಮಂಡಲ ಅಧ್ಯಕ್ಷೆ ಭೀಮಾಬಾಯಿ ಸೆಂಡಗಿ, ಶಕುಂತಲಾ ಗುಜ್ಜಲೂರ್, ರಮಾದೇವಿ ಕವಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

