ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ತಂದ ಉಪನ್ಯಾಸಕರಿಗೆ ಸನ್ಮಾನ ಸಮಾರಂಭ: ಪಾಲಾಮೂರ್
ನಾಗಾವಿ ಎಕ್ಸಪ್ರೆಸ್
ಚಿಂಚೋಳಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಕಲಬುರಗಿ ಜಿಲ್ಲಾ ಘಟಕ 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ತಂದ ಉಪನ್ಯಾಸಕರಿಗೆ ಅಭಿನಂದನಾ ಹಾಗೂ ಸನ್ಮಾನ ಸಮಾರಂಭವನ್ನು ಆಗಸ್ಟ್ 9 ರಂದು ಬೆಳಿಗ್ಗೆ 10.30 ಕ್ಕೆ ಕಲಬುರಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಪಾಲಾಮೂರ್ ತಿಳಿಸಿದ್ದಾರೆ.
ವಿವಿಧ ವಿಷಯಗಳಲ್ಲಿ ಶೇ.100 ರಷ್ಟು ಫಲಿತಾಂಶ ಬರಲು ಕಾರಣಿಭೂತರಾದ ನಮ್ಮ ತಾಲೂಕಿನ 33 ಉಪನ್ಯಾಸಕರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಪ್ರಿಯಾಂಕ್ ಖರ್ಗೆರವರ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ಸತ್ಕರಿಸಲಾಗುವುದು. ಈ ಅರ್ಥಪೂರ್ಣ ಸಮಾರಂಭದಲ್ಲಿ ತಾಲೂಕಿನ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಜರಾಗಬೇಕು ಎಂದು ಮನವಿ ಮಾಡಿದ್ದಾರೆ.

