ಚಿತ್ತಾಪುರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಸೃಜನ್ ಅಭಿಯಾನ ಸಭೆ | ಪಕ್ಷದ ಸಂಘಟನೆಗೆ ಕಾರ್ಯಕರ್ತರ ಶ್ರಮ ಪ್ರಮುಖ: ಕದಂ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಮೂಲಕ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಪಕ್ಷವು ಶ್ರಮಿಸುತ್ತಿದೆ. ಇದಕ್ಕೆಲ್ಲಾ ಕಾರಣವಾಗಿದ್ದು ನಮ್ಮ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರು ಎಂದು ಎಐಸಿಸಿ ವೀಕ್ಷಕ ವಿಶ್ವಜೀತ್ ಕದಂ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪದಾಧಿಕಾರುಗಳ, ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ನೇಮಕಕ್ಕೆ ಕುರಿತಾಗಿ ಶನಿವಾರ ನಡೆದ ಅಭಿಪ್ರಾಯ ಸಂಗ್ರಹದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಹೈಕಮಾಂಡ್ ಮುಂದಾಗಿದ್ದು ರಾಜ್ಯದಲ್ಲಿ ರಾಜ್ಯ ಪದಾಧಿಕಾರಿಗಳ ಮತ್ತು ಜಿಲ್ಲಾಧ್ಯಕ್ಷರಾಗಿರುವವರ ಅಧಿಕಾರವಧಿ ಮುಗಿದಿರುವ ಕಾರಣ ರಾಜ್ಯದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ನೂತನವಾಗಿ ನೇಮಕಕ್ಕೆ ಅಭಿಪ್ರಾಯವನ್ನು ಸಂಗ್ರಹಿಸಿಲು ವೀಕ್ಷಕರನ್ನು ನೇಮಿಸಿದ್ದು ಕಲಬುರಗಿ ಜಿಲ್ಲೆಗೆ ನನ್ನನ್ನು ನೇಮಿಸಿದ್ದು ನಾನು ತಾವುಗಳು ನೀಡುವ ಅಭಿಪ್ರಾಯ ಪಕ್ಷದ ಹೈಕಮಾಂಡ್ ಕ್ಕೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
ಎಂಎಲ್ಸಿ ಹಾಗೂ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷವು ನನ್ನಂತ ಸಾಮಾನ್ಯ ಕಾರ್ಯಕರ್ತನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿ ಪಕ್ಷ ಸಂಘಟನೆಗೆ ಅವಕಾಶ ಕಲ್ಪಿಸಿತ್ತು, ನಾವು ಪಕ್ಷದ ರ‍್ವರ ಒಮ್ಮತದಿಂದ ಸಂಘಟನೆ ಮಾಡಿದ್ದರಿಂದ ನಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಾಧ್ಯವಾಗಿದೆ. ಇದೇ ರೀತಿ ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಅಧ್ಯಕ್ಷ ಮೆಹಮೂದ್ ಸಾಹೇಬ್, ಮುಖಂಡರಾದ ಶಿವಾನಂದ ಪಾಟೀಲ್, ಶಿವರುದ್ರ ಭೀಣ್ಣಿ, ವೀರಣ್ಣಗೌಡ ಪರಸರೆಡ್ಡಿ, ಶ್ರೀನಿವಾಸ ಸಗರ, ಮಲ್ಲಿಕಾರ್ಜುನ ಕಾಳಗಿ, ಚಂದ್ರಶೇಖರ ಕಾಶಿ, ಮುಕ್ತಾರ ಪಟೇಲ್, ನಾಗರೆಡ್ಡಿ ಗೋಪಸೇನ್, ದೇವು ಯಾಬಾಳ, ಶರಣು ಡೋಣಗಾಂವ ಸೇರಿದಂತೆ ಇತರರು ಇದ್ದರು.

