Oplus_0

ದಂಡೋತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ | ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಪರ ಕಾರ್ಯಕ್ಕೆ ಮೆಚ್ಚುಗೆ: ಗುರುರಾಜ್ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಸಮಾಜಮುಖಿ ಹಾಗೂ ಜನಪರ ಕಾರ್ಯಗಳಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಯೋಜನಾಧಿಕಾರಿ ಗುರುರಾಜ್ ಬಿ ಹೇಳಿದರು.

ತಾಲೂಕಿನ ದಂಡೋತಿ ಗ್ರಾಮದ ವೈಷ್ಣವಿ ಜ್ಞಾನ ವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯೋಜನೆಯ ಹತ್ತು ಹಲವಾರು ಕಾರ್ಯಕ್ರಮಗಳ ಬಗ್ಗೆ ಮಹಿಳಾ ಸ್ವಾವಲಂಬಿ ಜೀವನವನ್ನು ನಡೆಸಲು ಸಹಕಾರಿ ಆಗಿರುವ ಜ್ಞಾನ ವಿಕಾಸ ಕಾರ್ಯಕ್ರಮ ಬಗ್ಗೆ  ಮಾತನಾಡಿದರು. ಈ ಶಿಬಿರದ ಮುಖ್ಯ ಉದ್ದೇಶ ಗ್ರಾಮೀಣ ಪ್ರದೇಶದ ಜನರಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಆರೋಗ್ಯ ತಪಾಸಣೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದು ಹೇಳಿದರು.

ಮುಖಂಡರಾದ ಅಬ್ದುಲ್ ರಶೀದ್ ಪಠಾಣ್ ದಾವೂದ್ ಪಟೇಲ್ ಅವರು ಮಾತನಾಡಿ, ಆರೋಗ್ಯ ತಪಾಸಣಾ ಶಿಬಿರಗಳು “ಆರೋಗ್ಯವೇ ಮಹಾಭಾಗ್ಯ” ಎಂಬ ಸಂದೇಶವನ್ನು ಜನರಲ್ಲಿ ಮೂಡಿಸುವುದರ ಜೊತೆಗೆ, ಸಮಯಕ್ಕೆ ಸರಿಯಾಗಿ ಆರೋಗ್ಯ ಸಮಸ್ಯೆಗಳನ್ನು ಗುರುತಿಸಲು ಸಹಕಾರಿಯಾಗುತ್ತವೆ. ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ಅರಿವು ಹೆಚ್ಚಿಸಿ, ಆರೋಗ್ಯವಂತ ಮತ್ತು ಸ್ವಾವಲಂಬಿ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿಯಾಗಿದೆ ಎಂದು ತಿಳಿಸಿದರು

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಸಾಮಾನ್ಯ ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯವಿರುವ ಪರೀಕ್ಷೆಗಳನ್ನು ನಡೆಸಲಾಯಿತು. ಅಗತ್ಯವಿರುವವರಿಗೆ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.

ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯವರು ಭಾಗವಹಿಸಿ, ಆರೋಗ್ಯಕರ ಜೀವನಶೈಲಿ, ಪೌಷ್ಟಿಕ ಆಹಾರ, ಸ್ವಚ್ಛತೆ, ವ್ಯಾಯಾಮ ಹಾಗೂ ರೋಗಗಳ ಮುನ್ನೆಚ್ಚರಿಕೆ ಕುರಿತು ಸಲಹೆ ನೀಡಿದರು.

ರಾಕೇಶ್ ಬನ್ನೇರ ದೃಷ್ಟಿ ಆಸ್ಪತ್ರೆ ವೈದ್ಯರು ಕಲಬುರಗಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಟಾಫ್ ನರ್ಸ್ ಗೌರಮ್ಮ. ದೃಷ್ಟಿ ಆಸ್ಪತ್ರೆ ವೈದ್ಯರಾದ ಮಂಜುನಾಥ ಬನ್ನೇರ, ವಲಯ ಮೇಲ್ವಿಚಾರಕ ಸಾಗರ, ಸ್ಥಳೀಯ ಸೇವಾ ಪ್ರತಿನಿಧಿ ರೇಣುಕಾ, ಸೇವಾದಾರ ಶಂಕರ, ಅಂಗನವಾಡಿ ಕಾರ್ಯಕರ್ತರಾದ ಅಕ್ಕಮಹಾದೇವಿ,  ಸುಮಲತಾ ಸೇರಿದಂತೆ ಆಶಾ ಕಾರ್ಯಕರ್ತರು, ಒಕ್ಕೂಟ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!