ಚಿತ್ತಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾರ್ಯನಿರ್ವಹಿಸಲು ಎರಡು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮುಖ್ಯಗುರು ಕಾಶಿರಾಯ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ದತ್ತಾಂಶ ನಿರ್ವಹಣಾ ಸಹಾಯಕ ಹಾಗೂ ಭದ್ರತಾ ಸಿಬ್ಬಂದಿ ಎರಡು ಹುದ್ದೆಗಳಿಗೆ ಅರ್ಜಿ ಕರೆದಿದ್ದು, ವರ್ಷದ 10 ತಿಂಗಳಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮಾಸಿಕ 10 ಸಾವಿರ ಸಂಬಳ ನಿಗದಿಪಡಿಸಲಾಗಿದ್ದು, ಆಸಕ್ತರು ಆಗಸ್ಟ್ 29 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳ ಪರಿಶೀಲನೆ ಆಗಸ್ಟ್ 31 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

