ಶಿವರಾವ್ ಪಾಟೀಲ ಬೆಳಗುಂಪಾ ನಿಧನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ತಾಲೂಕು ಅಧ್ಯಕ್ಷರು ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವರಾವ್ ಬಾಪುರಾವ್ ಪಾಟೀಲ ಬೆಳಗುಂಪಾ (84) ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಮೂವರು ಸಹೋದರರು ಹಾಗೂ ಮೂವರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಸೆ.8 ರಂದು ಸಾಯಂಕಾಲ 4 ಗಂಟೆಗೆ ಬೆಳಗುಂಪಾ ಗ್ರಾಮದ ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

