Oplus_0

ಪ್ರತಾಪ್ ಸಿಂಹ ವಿರುದ್ಧ ಕಾನೂನು ಕ್ರಮಕ್ಕೆ ಮಲ್ಲಿಕಾರ್ಜುನ ಕಾಳಗಿ ಆಗ್ರಹ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಮೈಸೂರು ಮಾಜಿ ಸಂಸದ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಆಗ್ರಹಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟದ ಸಂಕೇತವಾಗಿರುವ ನೀಲಿ ಶಾಲು ಮತ್ತು ಬಾವುಟವು ಮಾನವೀಯ ಸಂಬಂಧಗಳನ್ನು ಬೆಸೆಯುತ್ತದೆ. ಯಾವುದೇ ಕಾರಣಕ್ಕೂ ಜಾತಿ ಮತ್ತು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವುದಿಲ್ಲ ಎಂಬುದನ್ನು ಪ್ರತಾಪ ಸಿಂಹ ಅರಿತುಕೊಳ್ಳಬೇಕು. ಬಿಜೆಪಿ ಮತ್ತು ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದ ಪ್ರತಾಪ್ ಸಿಂಹ ಅಂಬೇಡ್ಕ‌ರ್ ಅವರನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಸಾಮಾಜಿಕ ಸಾಮರಸ್ಯ ಕದಡುವ ಹೇಳಿಕೆಗಳನ್ನು ಪ್ರತಾಪ್ ಸಿಂಹ ಹಿಂಪಡೆಯಬೇಕು. ದಲಿತ ಸಮುದಾಯದ ಭಾವನೆಗಳಿಗೆ ಗೌರವ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀಲಿ ಶಾಲಿನ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!