ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ, ಅಭ್ಯರ್ಥಿ ಶಶೀಲ್ ನಮೋಶಿ ಪರ ಪ್ರಚಾರ | ಬಿಜೆಪಿಗೆ ಸುಶಿಕ್ಷಿತರ ಬೆಂಬಲ ಹೆಚ್ಚು: ಅಶೋಕ ಬಗಲಿ

ನಾಗಾವಿ ಎಕ್ಸಪ್ರೆಸ್ 

ವಾಡಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಪರವಾಗಿ ಬಿಜೆಪಿ ಮುಖಂಡರು ಮಂಗಳವಾರ ಪಟ್ಟಣದ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಬಿರುಸಿನ ಮತಯಾಚನೆ ನಡೆಸಿದರು.

ಪಟ್ಟಣದ ವಿಪಿ ನಾಯಕ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ ಮಾತನಾಡಿ, ಸುಶಿಕ್ಷಿತರು ಹಾಗೂ ಶಿಕ್ಷಕರು ಹೆಚ್ಚಾಗಿ ಬಿಜೆಪಿಗೆ ಬೆಂಬಲಿಸುತ್ತಿದ್ದಾರೆ. ಅವರ ಆಶಯದಂತೆ ನಮ್ಮ ಪಕ್ಷದ ಅಭ್ಯರ್ಥಿ ಶಶೀಲ್ ನಮೋಶಿ ಅವರು ಸದಾ ಕಾರ್ಯೋನ್ಮುಖರಾಗಿ ಶ್ರಮಿಸುತ್ತಿದ್ದಾರೆ ಎಂದರು.

ಶಿಕ್ಷಕರ ಕಲ್ಯಾಣ ಹಾಗೂ ಅವರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಧ್ವನಿಯೆತ್ತುವ ಮತ್ತು ಶಿಕ್ಷಕರ ಪರವಾಗಿ ಕೆಲಸ ಮಾಡುವ ಶಶೀಲ್ ನಮೋಶಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಜಿಲ್ಲಾ ಉಪಾಧ್ಯಕ್ಷ ಶರಣು ಜ್ಯೋತಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ, ಮುಖಂಡರಾದ ವಿಠಲ್ ನಾಯಕ, ಭೀಮರೆಡ್ಡಿ ಗೌಡ ಕುರಾಳ, ಶರಣಗೌಡ ಚಾಮನೂರ, ಭೀಮಶಾ ಜಿರೋಳ್ಳಿ, ಭೀಮರಾವ್ ದೊರೆ, ಮಲ್ಲಿಕಾರ್ಜುನ ಸಾತಖೇಡ, ಆನಂದ ಇಂಗಳಗಿ, ಈರಣ್ಣ ಕಲ್ಯಾಣಿ, ಗುಂಡುಗೌಡ ಚಾಮನೂರ ಸೇರಿದಂತೆ ಹಲವು ಪ್ರಮುಖರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!