ಶಹಾಬಾದ ನಗರ ಠಾಣೆಯಲ್ಲಿ ಪ್ರಕರಣ ದಾಖಲು | ಪಡಿತರ ಅಕ್ಕಿ ಅಕ್ರಮ ಸಾಗಾಟ , 77 ಚೀಲ ಅಕ್ಕಿ, ಬುಲೆರೋ ವಾಹನ, ಇಬ್ಬರು ವಶಕ್ಕೆ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ನಗರದ ಜೇವರ್ಗಿ ರೋಡ ಕಡೆಯಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಅಕ್ರಮವಾಗಿ ಮಹೇಂದ್ರ ಬುಲೆರೋ ಕಂಪನಿಯ ಗೂಡ್ಸ್‌ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಬುಲೆರೋ ಗೂಡ್ಸ್ KA32AB-9893 ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಶಹಾಬಾದ ನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳಾದ ಮಹ್ಮದ್ ಜುನೈದ್ ನಿಸಾರ ಅಹ್ಮದ ಹಾಗೂ ವಾಹನ ಚಾಲಕ ನಾಗನಾಥಸಿಂಗ ಮೇಲೆ ಪ್ರಕರಣ ದಾಖಲಾಗಿದೆ.

ಮಹೇಂದ್ರ ಕಂಪನಿಯ ಗೂಡ್ಸ್ ವಾಹನದಲ್ಲಿ ಸುಮಾರು 3850 ಕೆಜಿ (38.50 ಕ್ವಿಂಟಲ್) 77 ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ತುಂಬಲಾಗಿದ್ದ ಪಡಿತರ ಅಕ್ಕಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 1,27,000 ರೂ. ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ (ಪಡಿತರ ಇಲಾಖೆಯ ಅಧಿಕಾರಿ) ಯಲ್ಲಾಲಿಂಗ ಕಡಕೋಳ ತಿಳಿಸಿದ್ದಾರೆ.

ನಗರ ಪೊಲೀಸ್ ಠಾಣೆಯ ಗುನ್ನೆ ಸಂ 149/2026 ಕಲಂ 3 & 7 ಇಸಿ ಆಕ್ಟ್ 1955 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!