Oplus_0

ಚಿತ್ತಾಪುರ ಹೊಂಗೀರಣ ಹಿರಿಯ ನಾಗರಿಕರ, ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಕಲಬುರಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆ ಕಲಬುರಗಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ 2026ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಂಗೀರಣ ತಾಲೂಕಾ ಹಿರಿಯ ನಾಗರಿಕರ, ನಾಗರಿಕಿಯರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘ ಚಿತ್ತಾಪುರ ಈ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಸಂಘದ ಅಧ್ಯಕ್ಷ ಮೊಹಮ್ಮದ್ ಇಬ್ರಾಹಿಂ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಯಾಗಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಅರುಣಕುಮಾರ ಲೋಯಾ, ಹಿರಿಯ ನ್ಯಾಯವಾದಿ ರಾಜೇ ಶಿವಶರಣಪ್ಪ ವಿಶೇಷ ಉಪನ್ಯಾಸ ನೀಡಿದರು.

ಈ ಸಂಘವು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026ರ ಪ್ರಯುಕ್ತ ಇಲಾಖೆಯ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ ಎಂದು ವಿಚಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ ಅವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!