ಯಾದಗಿರಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಮಾಲಿಪಾಟೀಲ್, ರೈತ ಮೋರ್ಚಾ ಅಧ್ಯಕ್ಷರಾಗಿ ಹಣಮಂತರಾಯಗೌಡ ಕುಪ್ಪಿ ನೇಮಕ: ವಿಭೂತಿಹಳ್ಳಿ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ರಾಜ್ಯದಾದ್ಯಂತ ಸಂಘಟನಾ ಪರ್ವದ ಭಾಗವಾಗಿ ಯಾದಗಿರಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಯುವ ಮೋರ್ಚಾ ಹಾಗೂ ರೈತ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿ ಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಮೋರ್ಚಾ:
ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನಾಗಿ ಲಕ್ಷ್ಮೀಪುತ್ರ ಮಾಲಿಪಾಟೀಲ್ ಯಾದಗಿರಿ, ಪ್ರಧಾನ ಕಾರ್ಯದರ್ಶಿಗಳಾಗಿ ಜಗದೀಶ ಪಾಟೀಲ್ ಸುರಪುರ, ಯಲಗೂರೇಶ ಗಂಗನಾಳ ಇವರನ್ನು ನೇಮಕ ಮಾಡಿ ಆದೇಶ ಹೊರಿಡಿಸಿದ್ದಾರೆ.
ರೈತ ಮೋರ್ಚಾ:
ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹಣಮಂತರಾಯಗೌಡ ಕುಪ್ಪಿ ಸುರಪುರ, ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಣ್ಣಗೌಡ ಮಾಲಿ ಪಾಟೀಲ್ ತಂಗಡಗಿ, ದೇವರಾಜ ಶಂಕರ ಚವ್ಹಾಣ ಶಹಾಪುರ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕೂಡಲೇ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಂಡು ಜಿಲ್ಲೆಯಲ್ಲಿ ಯುವ ಮೋರ್ಚಾ ಮತ್ತು ರೈತ ಮೋರ್ಚಾದ ಪದಾಧಿಕಾರಿಗಳನ್ನು ನೇಮಿಸಿ ಮೋರ್ಚಾದ ಘಟಕಗಳನ್ನು ರಚಿಸಿ ಪಕ್ಷದ ಸಂಘಟನೆ ಮತ್ತಷ್ಟು ಬಲ ಪಡಿಸಬೇಕು ಎಂದು ಸೂಚಿಸಿದ್ದಾರೆ.

