Oplus_0

ಆಂಧ್ರಪ್ರದೇಶದ ಗಣಿತ, ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ರಾಘವೇಂದ್ರ ಶರಣಯ್ಯ ಪ್ರಥಮ ಸ್ಥಾನ 

ನಾಗಾವಿ ಎಕ್ಸಪ್ರೆಸ್

ಸೇಡಂ: ವಿದ್ಯಾಭಾರತಿ – ದಕ್ಷಿಣ ಮಧ್ಯ ಕ್ಷೇತ್ರ ಸಮಿತಿ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ನವದೆಹಲಿಗೆ ಸಂಯೋಜಿತ) ವತಿಯಿಂದ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನುಟಕ್ಕಿ ಯಲ್ಲಿ ಅಕ್ಟೋಬರ್ 2 ರಿಂದ 4 ರವರೆಗೆ ನಡೆದ ಗಣಿತ, ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ಮಾತೃ ಛಾಯಾ ಪಿಯು ಕಾಲೇಜಿನ ವಿದ್ಯಾರ್ಥಿ ರಾಘವೇಂದ್ರ ಶರಣಯ್ಯ ಸಾವಯವ ಕೃಷಿ ಆಧಾರಿತ ಮಾದರಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ವಿದ್ಯಾರ್ಥಿ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!