ಪಂಚ್ ಗ್ಯಾರಂಟಿ ಸಮಿತಿ ಸದಸ್ಯ ರಮೇಶ ಹಡಪದ ಸನ್ಮಾನ | ಸಚಿವ ಪ್ರಿಯಾಂಕ್ ಖರ್ಗೆ ಕೈ ಬಲಪಡಿಸಿ: ಬೊಮ್ಮನಳ್ಳಿ ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಂಚ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈ ಇನ್ನಷ್ಟು ಬಲ ಪಡಿಸಬೇಕು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಕರೆ ನೀಡಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಡಪದ ಸಮಾಜದ ವತಿಯಿಂದ ಗುರುವಾರ ನಡೆದ ಪಂಚ್ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ರಮೇಶ ಹಡಪದ ಕೊಲ್ಲೂರ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರು ಪಂಚ್ ಗ್ಯಾರಂಟಿ ಸಮಿತಿಯಲ್ಲಿ ಪ್ರತಿಯೊಂದು ಜಾತಿಗೆ ಪ್ರಾತಿನಿಧ್ಯ ನೀಡಿದ್ದಾರೆ ಎಂದರು. ಪಂಚ್ ಗ್ಯಾರಂಟಿ ಯೋಜನೆಗಳ ಲಾಭವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ಪಂಚ್ ಗ್ಯಾರಂಟಿ ಸಮಿತಿಗೆ ಜಾತಿವಾರು 14 ಜನರನ್ನು ನಾಮನಿರ್ದೇಶನ ಮಾಡುವ ಮೂಲಕ ಸಣ್ಣ ಸಣ್ಣ ಸಮಾಜಗಳಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ, ಮಹಿಳೆಯರಿಗೆ ಹಾಗೂ ಯುವಕರಿಗೆ ತುಂಬಾ ಉಪಯುಕ್ತವಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಯಾವಾಗಲೂ ನಿಷ್ಠರಾಗಿರಬೇಕು ಆಗ ಉತ್ತಮ ಸ್ಥಾನಮಾನಗಳು ಸಿಗಲಿವೆ, ಈ ನಿಟ್ಟಿನಲ್ಲಿ ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವಂತಹ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ಯಾರಂಟಿ ಸಮಿತಿ ಸದಸ್ಯ ರಮೇಶ್ ಹಡಪದ ಕೊಲ್ಲೂರ, ಸಚಿವ ಪ್ರಿಯಾಂಕ್ ಖರ್ಗೆ ಅವರು ಹಡಪದ ಸಮಾಜದ ಸಮುದಾಯ ಭವನಕ್ಕೆ ಈಗಾಗಲೇ 15 ಲಕ್ಷ ಅನುದಾನ ನೀಡಿದ್ದಾರೆ ಹಾಗೂ ಮುಂದುವರೆದ ಕಾಮಗಾರಿಗೆ ಮತ್ತೆ 15 ಲಕ್ಷ ಅನುದಾನ ಬಿಡುಗಡೆ ಮಾಡಿದ್ದಾರೆ. ಪ್ರತ್ಯೇಕ ಅಭಿವೃದ್ಧಿ ನಿಗಮ ಆಗಿದೆ ಹೀಗಾಗಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹಡಪದ ಸಮಾಜದ ಜನಸಂಖ್ಯೆ ಹೆಚ್ಚಿದೆ ಹೀಗಾಗಿ ಈ ಭಾಗದವರಿಗೆ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನ ನೀಡಬೇಕು ಎಂಬುದು ಸಮಾಜದ ಕೂಗು ಇದೆ, ಬರುವ ದಿನಗಳಲ್ಲಿ ಹಿಂದುಳಿದ ಹಡಪದ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಿದರು.
ಪಂಚ್ ಗ್ಯಾರಂಟಿ ಸಮಿತಿ ಸದಸ್ಯರಾದ ಸೋಮಶೇಖರ ಟೋಕಾಪೂರ, ವಿನ್ನುಕುಮಾರ ಜಡಿ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜಯ್ ಬುಳಕರ್ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಹಡಪದ ಸಮಾಜದ ಮುಖಂಡರಾದ ಅಶೋಕ್ ಹಡಪದ, ಬಸವರಾಜ್ ಮುಡಬೂಳ, ಮುರುಳಿ ಹಡಪದ, ಶೇಖಪ್ಪ ದಂಡಗುಂಡ, ಸಿದ್ದು ಹಡಪದ, ಸಿದ್ದು ಭೀಮನಳ್ಳಿ, ಸಿದ್ದು ಸುಗೂರ, ವಿಶ್ವನಾಥ ಅಲ್ಲೂರ, ದೇವು ಲಾಡ್ಲಾಪೂರ, ವಿಜಯ ಕೊಲ್ಲೂರ ಸೇರಿದಂತೆ ಇತರರು ಇದ್ದರು. ಕಲ್ಯಾಣಿ ಗುಂಡಗುರ್ತಿ ನಿರೂಪಿಸಿದರು.

