Oplus_0

ದಂಡೋತಿ ಜಿ.ಪಂ ಕ್ಷೇತ್ರದಿಂದ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿ: ಇಬ್ರಾಹಿಂ ಕೋಳದ್ ಇಂಗಿತ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ದಂಡೋತಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಾರಿ ನಡೆಯಲಿರುವ ಚುನಾವಣೆಯಲ್ಲಿ ನನ್ನನ್ನು ಬಿಜೆಪಿ ಟಿಕೆಟ್ ನೀಡಬೇಕು ಅಲ್ಪಸಂಖ್ಯಾತರ ಮೋರ್ಚಾ ತಾಲೂಕು ಅಧ್ಯಕ್ಷ ಇಬ್ರಾಹಿಂ ಕೋಳದ್ ದಿಗ್ಗಾಂವ, ಪಕ್ಷದ ತಾಲೂಕು ಹಾಗೂ ಜಿಲ್ಲಾ ಮುಖಂಡರಲ್ಲಿ ಮನವಿ ಮಾಡಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಇಲ್ಲಿವರೆಗೆ ಅವಕಾಶ ನೀಡಿಲ್ಲ, ನನಗೆ ಜನಸೇವೆ ಮಾಡುವ ಉದ್ದೇಶ ಇದೆ ಆದ್ದರಿಂದ ಈ ಬಾರಿ ನಾನು ಆಕಾಂಕ್ಷಿಯಾಗಿದ್ದೇನೆ ಹೀಗಾಗಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ರಾಜಕೀಯ ಬಗ್ಗೆ ಅರಿವು ಬಂದಾಗಿನಿಂದ ನಾನು ಬಿಜೆಪಿಯಲ್ಲಿದ್ದೇನೆ, ಇಲ್ಲಿವರೆಗೆ ಪಕ್ಷದ ಸಂಘಟನೆ ಹಾಗೂ ಜನರ ಸೇವೆ ಪ್ರಾಮಾಣಿಕವಾಗಿ ಮಾಡಿದ್ದೇನೆ.  ಮುಂದೆಯೂ ಪಕ್ಷದ ಸಂಘಟನೆ ಇನ್ನಷ್ಟು ಬಲ ಪಡಿಸುವ ಉದ್ದೇಶವಿದೆ ಅಲ್ಲದೇ ಜೀವನದ ಕೊನೆಯ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದರು.

ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ದಂಡೋತಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕು ಎಂದು ಇಬ್ರಾಹಿಂ ಕೋಳದ್ ದಿಗ್ಗಾಂವ ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!