ಕಲಬುರ್ಗಿ ಎಂಪಿ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭದ ಪ್ರಯುಕ್ತ ನಾಳೆ ಪೂರ್ವಭಾವಿ ಸಭೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭ ನಿಮಿತ್ತ ಅ.23 ರಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ ಸಮಾರಂಭ ಇದೇ ಅ.25 ರಂದು ಪಟ್ಟಣದಲ್ಲಿ ಆಯೋಜಿಸಿದ್ದು, ಹೀಗಾಗಿ ಸಮಾರಂಭವನ್ನು ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಮಾಡುವ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಪುರಸಭೆ ಸದಸ್ಯರು ಮತ್ತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳು ನೀಡಬೇಕು ಎಂದು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕಾಶಿ, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ ಭೀಣ್ಣಿ, ಪುರಸಭೆ ಸದಸ್ಯ ವಿನೋದ ಗುತ್ತೇದಾರ, ಕಾಂಗ್ರೆಸ್ ಯುವ ಅಧ್ಯಕ್ಷ ಸಂಜಯ ಬುಳಕರ್, ಪ್ರಮುಖರಾದ ಸುನೀಲ್ ದೊಡ್ಡಮನಿ, ಮಲ್ಲಪ್ಪ ಹೊಸಮನಿ, ಶಿವಕಾಂತ್ ಬೆಣ್ಣೂರಕರ್, ರಾಮಲಿಂಗ ಬಾನರ್ ಇದ್ದರು.