ಯುವಕರಿಗೆ ಅವಕಾಶ ನೀಡಲು ಹೈಕಮಾಂಡ್ ಗೆ ಮನವಿ | ಕೊಲ್ಲೂರ್ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿ: ಮಹೇಶ್ ಬನ್ನಟ್ಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಕೊಲ್ಲೂರ್ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ (ಅನುಸೂಚಿತ ಜಾತಿ) ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಹೇಶ್ ಎಸ್ ಬನ್ನಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲ್ಲೂರ್ ತಾಲೂಕು ಪಂಚಾಯತ್ ಕ್ಷೇತ್ರದ ವ್ಯಾಪ್ತಿಯ ಬನ್ನಟ್ಟಿ ಗ್ರಾಮಕ್ಕೆ ಇಲ್ಲಿವರೆಗೆ ಅವಕಾಶ ನೀಡಿಲ್ಲ ಹಾಗೂ ಯುವಕರಿಗೆ ಅವಕಾಶ ನೀಡಿಲ್ಲ ಹೀಗಾಗಿ ಈ ಬಾರಿ ಬನ್ನಟ್ಟಿ ಗ್ರಾಮಕ್ಕೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಹಾಗೂ ತಾಲೂಕು ಅಧ್ಯಕ್ಷನಾಗಿ ಹಲವಾರು ರೈತ ಪರ ಹಾಗೂ ಸಾಮಾಜಿಕ ಹೋರಾಟಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ, ಈಗ ಜನಸೇವೆ ಮಾಡಲು ಉತ್ಸಾಹಕನಾಗಿದ್ದೇನೆ ಹೀಗಾಗಿ ತಾಪಂ ಕ್ಷೇತ್ರದ ಟಿಕೆಟ್ ನೀಡಿ ಪ್ರೋತ್ಸಾಹಿಸಿ ಆಶೀರ್ವದಿಸಬೇಕು ಎಂದು ಕೋರಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ 1008 ಮದುವೆಯಲ್ಲಿ ಚಿತ್ತಾಪುರ ತಾಲೂಕಿನ ಗ್ರಾಮೀಣ ಭಾಗದ ರೈತರ, ಬಡವರ ಮಕ್ಕಳು ಹಾಗೂ ಕೂಲಿ ಕಾರ್ಮಿಕರ ಮಕ್ಕಳನ್ನು ಗುರುತಿಸಿ 25 ಜೋಡಿಗಳನ್ನು ತೆಗೆದುಕೊಂಡು ಹೋಗಿ ಮದುವೆ ಮಾಡಿಸಿದ್ದೇನೆ. ತಾಪಂ ಚುನಾವಣೆಯಲ್ಲಿ ನನಗೆ ಅವಕಾಶ ಕೊಟ್ಟರೆ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆ ನೀಡಿದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.
ಈ ಬಾರಿ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಯುವಕರಿಗೆ ಅತಿ ಹೆಚ್ಚು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಇಷ್ಟರಲ್ಲೇ ಯುವಕರ ನಿಯೋಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಸನ್ನತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವುದಾಗಲಿ, ರೈತರ ಕ್ಯಾನಲ್ ಗಳಿಗೆ ನೀರು ಬೀಡುವುದಾಗಲಿ, ರೈತರು ರಸಗೊಬ್ಬರುಗಳನ್ನು ಖರೀದಿ ಮಾಡುವುದಾಗಲಿ ಹಲವಾರು ಸಮಸ್ಯೆಗಳಿಗೆ ನನ್ನ ಕೈಲಾದಷ್ಟು ಅಳಿಲು ಸೇವೆ ಸಲ್ಲಿಸಿದ್ದೇನೆ ಹೀಗಾಗಿ ನನಗೆ ಕೊಲ್ಲೂರ್ ತಾಲೂಕು ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.

