Oplus_0

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಶಶೀಲ್ ನಮೋಶಿ ಗೆಲುವು ಚಿತ್ತಾಪುರದಲ್ಲಿ ಬಿಜೆಪಿ ವಿಜಯೋತ್ಸವ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ರಾಜ್ಯದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಮೂಲಕ ಕಾಂಗ್ರೆಸ್ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಈ ನಿಟ್ಟಿನಲ್ಲಿ ಕಾಂಗ್ರೆಸ್ ಅವನತಿಯ ಹಾದಿ ಹಿಡಿದಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲುವು ಸಾಧಿಸಿದ ಪ್ರಯುಕ್ತ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಪದವೀಧರರು, ಶಿಕ್ಷಕರು ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿದ್ದಾರೆ

ಪುರಸಭೆ ಮಾಜಿ ಅಧ್ಯಕ್ಷ ನಾಗರಾಜ ಭಂಕಲಗಿ ಮಾತನಾಡಿ, ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಮೊದಲ ಪ್ರಾಶಸ್ತ್ಯ ಮತಗಳಿಂದ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ ಎಂದು ಹೇಳಿದರು.

ವಿಜಯೋತ್ಸವದಲ್ಲಿ ಬಿಜೆಪಿ ಮುಖಂಡರಾದ ಅಶೋಕ್ ನಿಪ್ಪಾಣಿ, ಶಾಂತಕುಮಾರ್ ಮಳಖೇಡ, ದೀಪಕ್ ಹೊಸ್ಸುರಕರ್, ಗೋಪಾಲ ರಾಠೋಡ, ಮಲ್ಲಿಕಾರ್ಜುನ ಅಲ್ಲೂರಕರ್, ನಾಗರಾಜ ಹೂಗಾರ, ರಮೇಶ್ ಬೊಮ್ಮನಳ್ಳಿ, ಹೀರು ರಾಠೋಡ, ಬಸವರಾಜ ಸಂಕನೂರ, ಪ್ರಸಾದ್ ಅವಂಟಿ, ಸಂಗಮೇಶ ಪಾಟೀಲ, ಅಶ್ವಥ್ ರಾಠೋಡ, ಅಂಬರೀಷ್ ಭೋವಿ, ಸಿದ್ದು ರೇಷ್ಮೆ, ಚಂದ್ರು ಕಾಳಗಿ, ಸುನೀಲ್ ರಾಠೋಡ, ಉದಯಕುಮಾರ ಸಿಂಪಿ, ಶಿವರಾಮ್ ಚವ್ಹಾಣ, ಹನುಮಾನ್ ವ್ಯಾಸ್ ಸೇರಿದಂತೆ ಇತರರು ಇದ್ದರು. ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ವಿಜಯೋತ್ಸವ ಆಚರಿಸಿದರು.

“ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಲ್ಲಿ ಮೂರರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಈ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ, ಶಿಕ್ಷಕ ಮತದಾರರು ಬಿಜೆಪಿ ಪರ ಇದ್ದಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಐದನೇ ಬಾರಿಗೆ ಶಶೀಲ್ ನಮೋಶಿ ಅವರನ್ನು ಗೆಲ್ಲಿಸಿದ ಶಿಕ್ಷಕ ಮತದಾರರಿಗೆ ಕೃತಜ್ಞತೆಗಳು”.-ಬಸವರಾಜ ಬೆಣ್ಣೂರಕರ್ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ.

Spread the love

Leave a Reply

Your email address will not be published. Required fields are marked *

You missed

error: Content is protected !!