Oplus_0

ಚಿತ್ತಾಪುರ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ 11, ವಾಡಿ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ 6 ಅರ್ಜಿಗಳು ಸಲ್ಲಿಕೆ | ಡಿಸೆಂಬರ್ ತಿಂಗಳಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ: ಅರಳಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಸಂಘಟನ್ ಸೃಜನ್ ಅಭಿಯಾನ-2ರ ಭಾಗವಾಗಿ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 11 ಹಾಗೂ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 6 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ವಿಕ್ಷಕ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂಘಟನ್ ಸೃಜನ್ ಅಭಿಯಾನ-2ರ ಚಿತ್ತಾಪುರ-ವಾಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಸಿ, ಬಿಸಿಸಿ ಮತ್ತು 31 ಸೆಲ್ ಗಳಿಗೆ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ಹಾಗೂ ವಿಶೇಷವಾಗಿ 10 ಬೂತ್ ಗಳಿಗೆ ಒಬ್ಬ ಅಧ್ಯಕ್ಷ ಪದಾಧಿಕಾರಿಗಳನ್ನು ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ನೇಮಕ ಮಾಡಲಾಗುವುದು ಈ ನಿಟ್ಟಿನಲ್ಲಿ ಪಕ್ಷವನ್ನು ಲೀಡರ್ ಬೇಸನಿಂದ ಕೇಡರ್ ಬೇಸ್ ಗೆ ತರಲಾಗುತ್ತದೆ ಎಂದು ಹೇಳಿದರು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಹೆಸರು ಅವರಿಂದ ಪಡೆದ ಅಭಿಪ್ರಾಯ, ಬೆಂಬಲಿಗರಿಂದ ಮತ್ತು ಕಾರ್ಯಕರ್ತರಿಂದ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಟ್ಟು, ಕೆಪಿಸಿಸಿ ಗೆ ವರದಿ ಕಳುಹಿಸಲಾಗುವುದು ಬರುವ ಡಿಸೆಂಬರ್ ತಿಂಗಳಲ್ಲಿ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಹೆಸರು ಘೋಷಣೆ ಆಗಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ವಿಕ್ಷಕ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಕೆಪಿಸಿಸಿ ಸಂಯೋಜಕರಾದ ಲಕ್ಷ್ಮೀಪತಿ, ಅಕ್ಕಮಹಾದೇವಿ ಆರ್. ಪಾಟೀಲ ಅವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಮರಗೋಳ, ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ, ಮುಕ್ತಾರ್ ಪಟೇಲ್, ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಮಲ್ಲಿಕಾರ್ಜುನ ಬೊಮ್ಮನಳ್ಳಿ, ನಾಗರೆಡ್ಡಿ ಗೋಪಸೇನ್, ಎಂ.ಎ.ರಷೀದ್, ದೇವಿಂದ್ರ ಅರಣಕಲ್, ದೇವು ಯಾಬಾಳ, ಕಾಸಿಂ ಎಟುಜಡ್, ಸಂಜಯ್ ಬುಳಕರ್, ನಜೀರ್ ಆಡಕಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!