Oplus_0

ಶಹಾಪುರದಲ್ಲಿ ಅ.30 ರಂದು ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್‌ ಅಭಿನಂದನಾ ಸಮಾರಂಭ: ವಿಭೂತಿಹಳ್ಳಿ ಮಾಹಿತಿ

ನಾಗಾವಿ ಎಕ್ಸಪ್ರೆಸ್ 

ಯಾದಗಿರಿ: ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ಪ್ರೊ. ಎಂ. ನಾಗರಾಜ್ ಅವರಿಗೆ ಅಕ್ಟೋಬರ್ 30ರಂದು ಬೆಳಗ್ಗೆ 11ಕ್ಕೆ ಶಹಾಪುರ ನಗರದ ಸುರಪುರ ರಸ್ತೆಯಲ್ಲಿರುವ ಚಾಂದ್ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದಲ್ಲಿನ ಕುರುಬ ಸಮಾಜದ ಮುಖಂಡರಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರು ಇತ್ತೀಚೆಗೆ ಕೇರಳ ರಾಜ್ಯದ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮೊದಲ ಬಾರಿಗೆ ಯಾದಗಿರಿ ಜಿಲ್ಲೆಗೆ ಆಗಮಿಸುತ್ತಿದ್ದು, ಅವರನ್ನು ಗೌರವಿಸುವ ಉದ್ದೇಶದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರೊ. ಎಂ. ನಾಗರಾಜ್ ಅವರು ರಾಜ್ಯಸಭಾ ಸದಸ್ಯರಾದ ಬಳಿಕ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ದಾವಣಗೆರೆಯಲ್ಲಿ ಸಮಾಜದ ವತಿಯಿಂದ ಅವರಿಗೆ ಸನ್ಮಾನ ಮಾಡಲಾಗಿದೆ. ಅ.28ರಂದು ಬಾಗಲಕೋಟೆ ಹಾಗೂ ಅ.29ರಂದು ವಿಜಯಪುರದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅ.30ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಂದು ಬೆಳಿಗ್ಗೆ ಯಾದಗಿರಿ ನಗರಕ್ಕೆ ಆಗಮಿಸುವ ಪ್ರೊ. ನಾಗರಾಜ್ ಅವರು, ಕೊಳೂರು ಮಲ್ಲಪ್ಪಾಜಿ ಅವರ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ ಶಹಾಪುರಕ್ಕೆ ತೆರಳಿ ಚಾಂದ್ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರಾಜುಗೌಡ, ಪಕ್ಷದ ರಾಜ್ಯ ಕಾರ್ಯದರ್ಶಿ ಲಲಿತಾ ಅನಪೂರ, ಶಹಾಪುರದ ನಿಕಟಪೂರ್ವ ಅಧ್ಯಕ್ಷ ಹಾಗೂ ಯುವ ಮುಖಂಡ ಅಮಿರೆಡ್ಡಿ ಯಾಳಗಿ, ಯಾದಗಿರಿಯ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ರೆಡ್ಡಿ ಮುದ್ನಾಳ ಬಿಜೆಪಿಯ ಮುಖಂಡರಾದ ರಾಚಣ್ಣಗೌಡ ಮುದ್ನಾಳ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಇದಲ್ಲದೆ, ಸಮಾಜದ ಮುಖಂಡರಾದ ಸಿದ್ದನಗೌಡ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಗದ್ಯಪ್ಪ ಪೂಜಾರಿ ಸೇರಿದಂತೆ ಮಾಜಿ ಹಾಗೂ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಸಮಾಜದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮಾಜದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿನಂದನಾ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಬಸವರಾಜಪ್ಪ ವಿಭೂತಿಹಳ್ಳಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಸಿದ್ದಣಗೌಡ ಕಾಡಂನೋರ, ಮಲ್ಲು ದಂಡಿನ್, ಸಿದ್ದು ಪೂಜಾರಿ, ಮಹೇಶ ಚಂದ್ರಶೇಖರ್ ಕಡೆಸೂರ್, ಸಿದ್ದಣ್ಣಗೌಡ ವಡಿಗೇರಿ, ಮಲ್ಲಿಕಾರ್ಜುನ ಕಂದಕೂರ, ಮಲ್ಲು ದಂಡಿನ್, ಮಲ್ಲಿಕಾರ್ಜುನ ಕರಕಿಹಳ್ಳಿ, ರಾಜಶೇಖರ ಕಾಡ್ಮನೂರ, ಶಿವುಕೂಮಾರ ಕೊಂಕಲ್, ಬಾಲಕೃಷ್ಣ ಹುಲ್ಕಲ್, ಮಹೇಶ್ ರಸ್ತಾಪೂರ, ರೇವಣಸಿದ್ದು ಗುಂಡಾಪುರ ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!