Oplus_0

ಜಿಲ್ಲಾಧಿಕಾರಿಗಳಿಗೆ ಮನವಿ | ವಾಡಿ ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳು ಒದಗಿಸಲು ಬಿಜೆಪಿ ಆಗ್ರಹ 

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಅವರು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದಾದ್ಯಂತ 3-4 ದಿನಗಳಿಗೊಮ್ಮೆ ಅಶುದ್ಧ ನೀರು ಪೂರೈಕೆಯಾಗುತ್ತಿದ್ದು, ಪ್ರತಿದಿನ ಶುದ್ಧ ಕುಡಿಯುವ ನೀರು ಒದಗಿಸಬೇಕು, ಪುರಸಭೆಯ ವಿವಿಧ ಯೋಜನೆಗಳ ದುರ್ಬಳಕೆಗಳನ್ನು ತಕ್ಷಣ ತಡೆಯಬೇಕು, ಸಾರ್ವಜನಿಕ ಶೌಚಾಲಯ, ಬಸ್ ನಿಲ್ದಾಣ, ಪ್ರತ್ಯೇಕ ತರಕಾರಿ ಮತ್ತು ಮಾಂಸದ ಮಾರುಕಟ್ಟೆ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು, ಕಳೆದ 8-10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಪಿಎಂಸಿ ಮಾರುಕಟ್ಟೆಯನ್ನು ತಕ್ಷಣ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ತ್ಯಾಜ್ಯ ಸಂಸ್ಕರಣಾ ಘಟಕದ ಸೂಕ್ತ ನಿರ್ವಹಣೆ, ಪರಿಸರ ಮಾಲಿನ್ಯ ತಡೆಗೆ ಪ್ರತಿ 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಬೇಕು, ಪಟ್ಟಣದ ಜನರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರದ ಮೂಲಕ ಒತ್ತಾಯಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!