Oplus_0

ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಶ್ರೀಮಂತ ಗುತ್ತೇದಾರ ನೇಮಕ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಚಿತ್ತಾಪುರ ತಾಲೂಕು ಅಧ್ಯಕ್ಷರನ್ನಾಗಿ ಶ್ರೀಮಂತ ಗುತ್ತೇದಾರ ದಿಗ್ಗಾಂವ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹಣಮಂತರಾಜು.ಡಿ.ಆ‌ರ್ ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಸಿ.ತಿಪ್ಪೇಸ್ವಾಮಿರವರ ಆದೇಶದ ಮೇರೆಗೆ  ನೇಮಕಾತಿ ಮಾಡಲಾಗಿದೆ. ಆದ್ದರಿಂದ ಮಹಾಮಂಡಳಿಯ ಸಿದ್ಧಾಂತ ಮತ್ತು ಸಂವಿಧಾನ ನಿಯಮಕ್ಕೆ ಒಳಪಟ್ಟು ಪದಾಧಿಕಾರಿಗಳೊಂದಿಗೆ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಂಘದ ಗೌರವವನ್ನು ಹೆಚ್ಚಿಸುವುದರೊಂದಿಗೆ ಈ ಕೂಡಲೇ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಪ್ರವೃತ್ತಿಯಲ್ಲಿ ನಿರತರಾಗಬೇಕು ಎಂದು ಸೂಚಿಸಿದ್ದಾರೆ.

ನ್ಯಾಯ, ನೀತಿ, ನಿಷ್ಠೆ, ಪ್ರಾಮಾಣಿಕತೆಯಿಂದ ಈಡಿಗ ಸಮಾಜದ ಶ್ರೇಯೋಭಿವೃದ್ಧಿಗಾಗಿ ಹೋರಾಡುವುದರ ಜೊತೆಗೆ ನಾಡು, ನುಡಿ, ಜಲ, ಭಾಷೆ, ಸಂಸ್ಕೃತಿ ಮತ್ತು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಪರಿಣಾಮಕಾರಿಯಾಗಿ ಹೋರಾಟ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದ್ದಾರೆ.

ನೇಮಕಾತಿ ಪತ್ರವನ್ನು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು ನೂತನ ಅಧ್ಯಕ್ಷ ಶ್ರೀಮಂತ ಗುತ್ತೇದಾರ ಅವರಿಗೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ಚಿತ್ರದುರ್ಗ, ಪ್ರಧಾನ ಕಾರ್ಯದರ್ಶಿ ಹಣಮಂತರಾಜು.ಡಿ.ಆ‌ರ್ ಅವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!