Oplus_0

ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿ ಆಚರಣೆ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ಇಟಗಾ ಗ್ರಾಮದ ಹತ್ತಿರದ  ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಂಪನಿಯ ಮುಖ್ಯಸ್ಥ ಅಜಯ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಗೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರು ಭಾಗವಹಿಸಿ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ಸ್ಮರಿಸಿದರು.

ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಆಚರಿಸಲಾಯಿತು.

Spread the love

Leave a Reply

Your email address will not be published. Required fields are marked *

error: Content is protected !!