Oplus_0

ವಾಡಿಯಲ್ಲಿ ಬಿ.ವೈ. ವಿಜಯೇಂದ್ರ ಜನ್ಮದಿನಾಚರಣೆ  |  ಬಿಜೆಪಿ ಮುಖಂಡರಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹಣ್ಣು ಹಂಪಲು ವಿತರಣೆ

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣದ ಶ್ರೀ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಜನ್ಮದಿನಾಚರಣೆಯ ಪ್ರಯುಕ್ತ ವಿಶೇಷ ಪೂಜೆ ಹಾಗೂ ಹಣ್ಣು ವಿತರಣೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಬಿ.ವೈ. ವಿಜಯೇಂದ್ರ ಅವರಿಗೆ ಆಯುರಾರೋಗ್ಯ, ದೀರ್ಘಾಯುಷ್ಯ ದೊರೆಯಲಿ ಹಾಗೂ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ರಾಜ್ಯಾದ್ಯಂತ ಇನ್ನಷ್ಟು ಬಲಗೊಳ್ಳಲಿ ಎಂದು ಮುಖಂಡರು ಆಶಿಸಿದರು.

ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಜ್ಯ ರಾಜಕೀಯ ಅಖಾಡದಲ್ಲಿ ತಮ್ಮದೇ ಆದ ಸಂಘಟನಾ ಕೌಶಲ್ಯ ಹಾಗೂ ಸಕ್ರಿಯ ನಾಯಕತ್ವದ ಮೂಲಕ ಗಮನ ಸೆಳೆದಿರುವ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಪ್ರಮುಖ ಯುವ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಪಕ್ಷದ ಯುವ ಮೋರ್ಚಾದಿಂದ ಆರಂಭಿಸಿ ರಾಜ್ಯಾಧ್ಯಕ್ಷ ಹುದ್ದೆಯವರೆಗಿನ ಅವರ ರಾಜಕೀಯ ಪಯಣವು ಕಾರ್ಯಕರ್ತರಲ್ಲಿ ಹೆಮ್ಮೆ ತಂದಿದೆ ಎಂದರು.

ಕಿರಿಯ ವಯಸ್ಸಿನಲ್ಲಿಯೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ವಿಜಯೇಂದ್ರ ಅವರು, ಹಿರಿಯ ನಾಯಕರ ಮಾರ್ಗದರ್ಶನ ಮತ್ತು ಯುವ ಕಾರ್ಯಕರ್ತರ ಉತ್ಸಾಹವನ್ನು ಒಗ್ಗೂಡಿಸಿ ಕೊಂಡೊಯ್ಯುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ನಡೆಸಿ ಸ್ಥಳೀಯ ಮಟ್ಟದ ಕಾರ್ಯಕರ್ತರನ್ನು ತಲುಪುವ ಅವರ ಶೈಲಿ ಪಕ್ಷ ಸಂಘಟನೆಗೆ ಹೊಸ ಚೇತನ ನೀಡಿದೆ ಎಂದು ಶುಭ ಹಾರೈಸಿದರು.

ಇದೇ ವೇಳೆ ರಾಜಕೀಯ ಮತ್ತು ಕ್ರೀಡಾ ಕ್ಷೇತ್ರದ ಯುವತಾರೆಗಳಾದ ಬಿ.ವೈ. ವಿಜಯೇಂದ್ರ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಜನ್ಮದಿನವನ್ನು ಅವರ ಭಾವಚಿತ್ರಗಳೊಂದಿಗೆ ಸಿಹಿ ಹಂಚುವ ಮೂಲಕ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ್ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್‌ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಶರಣಗೌಡ ಚಾಮನೂರ, ಭೀಮಶಾ ಜಿರೋಳ್ಳಿ, ಅಶೋಕ ಪವಾರ, ಶಿವಶಂಕರ ಕಾಶೆಟ್ಟಿ, ದತ್ತಾ ಖೈರೆ, ಹರಿ ಗಲಾಂಡೆ, ಮಲ್ಲಿಕಾರ್ಜುನ ಸಾತಖೇಡ, ಕಾಶಿನಾಥ ಶೆಟಗಾರ, ಶಿವಕುಮಾರ ಹೂಗಾರ, ರಮೇಶ ಜಾಧವ, ವಿಶಾಲ ನಿಂಬರ್ಗಾ, ದತ್ತಾ ಬಾರಟಕ್ಕೆ, ಅಮರ ಭಗಾಡೆ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!