ಇಟಗಾ ಮರಗಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ.ಡಿ ಡಿ ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಇಟಗಾ ಗ್ರಾಮದ ಶ್ರೀ ಮರಗಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂಪಾಯಿ ಮೊತ್ತದ ಡಿಡಿಯನ್ನು ದೇವಸ್ಥಾನದ ಕಮಿಟಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಗುರುರಾಜ್ ಬಿ. ಅವರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ 2 ಲಕ್ಷ ರೂಪಾಯಿ ಮೊತ್ತದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ದೇವಸ್ಥಾನದ ಕಮಿಟಿಯವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಗೌರವಾಧ್ಯಕ್ಷ ಬಸವರಾಜ್ ಸಾಲಹಳ್ಳಿ, ಉಪಾಧ್ಯಕ್ಷ ರಾಯಪ್ಪ ನಾಯ್ಕಲ್, ಕಾರ್ಯದರ್ಶಿ ನಾಗರಾಜ್ ದೊಡ್ಡಮನಿ, ವಲಯ ಮೇಲ್ವಿಚಾರಕ ತುಕಾರಾಂ ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಗ್ರಾಮೀಣ ಭಾಗದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೆರವು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

