Oplus_0

ಸುರೇಶ್ ಗುತ್ತೇದಾರ ಕರದಾಳ ನಿಧನ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಕರದಾಳ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಭೂದಾನಿ, ಗ್ರಾಪಂ ಮಾಜಿ ಸದಸ್ಯ, ಪಂಚ್ ಗ್ಯಾರಂಟಿ ಸಮಿತಿ ಸದಸ್ಯ ಹಾಗೂ ಕಲ್ಯಾಣ ಕರ್ನಾಟಕ ರೈತ ಸಂಘದ ಅಧ್ಯಕ್ಷ ಸುರೇಶ್ ಗುತ್ತೇದಾರ (45) ಶನಿವಾರ ಬೆಳಗ್ಗೆ ನಿಧನರಾಗಿದ್ದು, ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅಂತಿಮ ಸಂಸ್ಕಾರ ಭಾನುವಾರ ಕರದಾಳ ಸ್ವಗ್ರಾಮದ ಸ್ವಂತ ಹೊಲದಲ್ಲಿ ಮದ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತೀವ್ರ ಸಂತಾಪ: ಮಹಲರೋಜ್ ಶ್ರೀ ಮಲ್ಲಿಕಾರ್ಜುನ ಮುತ್ಯಾ, ಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು, ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ತೊನಸನಳ್ಳಿ ಶ್ರೀ ಮಲ್ಲಣಪ್ಪ ಮಹಾಸ್ವಾಮಿಗಳು, ಅಳ್ಳೋಳ್ಳಿ ಶ್ರೀ ಸಂಗಮನಾಥ ಮಹಾಸ್ವಾಮಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಮರಗೋಳ, ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಪಂಚ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಉದ್ಯಮಿಗಳಾದ ಸತೀಶ್ ಗುತ್ತೇದಾರ, ನಿತಿನ್ ಗುತ್ತೇದಾರ, ವೆಂಕಟೇಶ್ ಕಡೇಚೂರ, ಮಹಾದೇವ ಗುತ್ತೇದಾರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!