Oplus_0

ಚಿತ್ತಾಪುರದಲ್ಲಿ ನ.28 ರಂದು ಬಸವ ಭವನ, ವೀರಶೈವ ಲಿಂಗಾಯತ ವಿಧ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನೆ: ನಾಗರೆಡ್ಡಿ ಪಾಟೀಲ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ರಾವೂರ ರಸ್ತೆಯಲ್ಲಿ ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಾಣವಾದ ಬಸವ ಭವನ ಹಾಗೂ ವೀರಶೈವ ಲಿಂಗಾಯತ ವಿಧ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನಾ ಸಮಾರಂಭವನ್ನು ಇದೇ ನವೆಂಬರ್ 28 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಎಪಿಎಂಸಿಯ ಅಣ್ಣಾರಾವ್ ಪಾಟೀಲ ಅಡತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ವಾಸ್ತು ಪೂಜೆ ನಡೆಯಲಿದ್ದು,  10 ರಿಂದ 11 ಗಂಟೆಯವರೆಗೆ ದಾನಿಗಳಿಗೆ ಸನ್ಮಾನ ಸಮಾರಂಭ ನಂತರ ಉದ್ಘಾಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಚಿತ್ತಾಪುರ ಪಟ್ಟಣದಲ್ಲಿ ಕಳೆದ 18 ವರ್ಷಗಳ ಹಿಂದೆ ಶ್ರೀ ಬಸವೇಶ್ವರ ಪುತ್ಥಳಿ ಅನಾವರಣವನ್ನು ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ್ದರು. ಈಗ ಅವರಿಂದಲೇ ಬಸವ ಭವನ ಉದ್ಘಾಟನೆಗೆ ಆಗುತ್ತಿರುವುದು ವಿಶೇಷ. ಇದೊಂದು ಐತಿಹಾಸಿಕ ಹಾಗೂ ಕಲಬುರಗಿ ಜಿಲ್ಲೆಗೆ ಮಾದರಿ ಕಾರ್ಯವಾಗಿದೆ. ಅಂದಾಜು 4 ಕೋಟಿ ವೆಚ್ಚದಲ್ಲಿ ಬಸವ ಭವನ ಹಾಗೂ 75 ಲಕ್ಷ ವೆಚ್ಚದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ. ಇದು ದಾನಿಗಳ ಹಾಗೂ ಟ್ರಸ್ಟ್ ಪದಾಧಿಕಾರಿಗಳ ಸಹಕಾರದಿಂದ ಸಾಧ್ಯವಾಗಿದೆ ಎಂದು ಹೇಳಿದರು.

ಬಸವ ಭವನವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿದ್ಯಾಥಿರ್ನಿಯರ ವಸತಿ ನಿಲಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಉದ್ಘಾಟಿಸುವರು, ಮಾಜಿ ಸಚಿವ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಅವರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಎಮ್. ವಾಯ್. ಪಾಟೀಲ್, ಬಿ. ಆರ್. ಪಾಟೀಲ್, ಅಲ್ಲಮ್ ಪ್ರಭು ಪಾಟೀಲ್, ಶಶಿಲ್ ಜಿ. ನಮೋಶಿ, ಬಿ. ಜಿ. ಪಾಟೀಲ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ನಿವೃತ್ತ ಮುಖ್ಯ ಅಭಿಯಂತರ ಜೆ. ಪಿ. ರೆಡ್ಡಿ  ಬೆಂಗಳೂರು ಅವರು ಆಗಮಿಸಲಿದ್ದಾರೆ.

ನಾಲವಾರ ಶ್ರೀ ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಸೇಡಂ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು, ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ಮುಗಳನಾಗಾಂವ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ದಿಗ್ಗಾಂವ ಶ್ರೀ ಸಿದ್ಧವೀರ ಶಿವಾಚಾರ್ಯರು, ಹಲಕರ್ಟಿ ಶ್ರೀಗಳಾದ ಮುನಿಂದ್ರ ಶಿವಾಚಾರ್ಯರು, ರಾಜಶೇಖರ ಶಿವಾಚಾರ್ಯರು, ಬೆಳಗುಂಪಾ ಶ್ರೀ ಪರಮೇಶ್ವರ ಶಿವಾಚಾರ್ಯರು, ದಂಡಗುಂಡ ಶ್ರೀ ಸಂಗನ ಬಸವ ಶಿವಾಚಾರ್ಯರು, ಅಳ್ಳೋಳ್ಳಿ ಶ್ರೀ ಸಂಗಮನಾಥ ದೇವರು, ರಾವೂರ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ದಿಗ್ಗಾಂವ ಕಂಚಗಾರಹಳ್ಳಿಯ ಮಲ್ಲಯ್ಯ ಸ್ವಾಮಿಗಳು, ಮಾಲಗತ್ತಿ ಶ್ರೀ ಚೆನ್ನಬಸವ ಶರಣರು ಅವರು ದಿವ್ಯ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಭಂಕಲಗಿ, ಖಜಾಂಚಿ ಅಣ್ಣರಾವ್ ಪಾಟೀಲ ಮೂಡಬೂಳ, ಸದಸ್ಯರಾದ ಚಂದ್ರಶೇಖರ ಸಾತನೂರ, ಶರಣಗೌಡ ಪಾಟೀಲ, ಅನೀಲ್ ವಡ್ಡಡಗಿ, ಪ್ರಭುದೇವ ಬೊಮ್ಮನಳ್ಳಿ, ಶರಣು ಸಜ್ಜನಶೆಟ್ಟಿ, ಚಂದ್ರಕಾಂತ ಪಾಟೀಲ ಬೆಳಗುಂಪಾ, ಅಶೋಕ ನಿಪ್ಪಾಣಿ ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!