ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ
ಚಿತ್ತಾಪುರದಲ್ಲಿ ಅ. 25 ರಂದು ಸಂಸದ ರಾಧಾಕೃಷ್ಣ ದೊಡ್ಡಮನಿ ಅಭಿನಂದನಾ ಸಮಾರಂಭ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರ್ಗಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ನಂತರ ರಾಧಾಕೃಷ್ಣ ದೊಡ್ಡಮನಿ ಅವರು ಇದೇ ಅ.25 ರಂದು ಪ್ರಪ್ರಥಮ ಬಾರಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸುತ್ತಿರುವ ಪ್ರಯುಕ್ತ ಚಿತ್ತಾಪುರ ಮತ್ತು ವಾಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಅಭಿನಂದನಾ ಸಮಾರಂಭವನ್ನು ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಅಭಿನಂದನಾ ಸಮಾರಂಭದ ನಿಮಿತ್ತ ಪೂರ್ವಭಾವಿ ಸಭೆ ಜರುಗಿತು. ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಪಟ್ಟಣದ ಸುಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನಕ್ಕೆ ಮತ್ತು ಹಜರತ್ ಚಿತ್ತಷಾವಲಿ ದರ್ಗಾಕ್ಕೆ ಭೇಟಿ ನೀಡಿ ನಂತರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರ ಮೂರ್ತಿಗೆ ಮಲಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಭವ್ಯ ಮೆರವಣಿಗೆ : ಪಟ್ಟಣದ ಚಿತ್ತಷಾವಲಿ ವೃತ್ತದಿಂದ ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಿ , ಜನತಾ ಬಜಾರ, ಭುವನೇಶ್ವರಿ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ಮೂಲಕ ಬಜಾಜ್ ಕಲ್ಯಾಣ ಮಂಟಪದ ಮುಖ್ಯ ವೇದಿಕೆಗೆ ತಲುಪಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಸಕ ಡಾ. ಅಜಯಸಿಂಗ, ಶಾಸಕ ಎಂವೈ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಕಾರಣ ತಾಲೂಕಿನ ಜಿ.ಪಂ, ತಾಪಂ ಮಾಜಿ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪುರಸಭೆ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ವಾಡಿ ಬ್ಲಾಕ್ ಅಧ್ಯಕ್ಷ ಮಹಿಮೂದ ಸಾಹೇಬ್, ಪ್ರಮುಖರಾದ ವೀರಣ್ಣಗೌಡ ಪರಸರಡ್ಡಿ, ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್, ಜಯಪ್ರಕಾಶ ಕಮಕನೂರ, ಚಂದ್ರಶೇಖರ ಕಾಶಿ, ಶಿವರುದ್ರ ಭೀಣಿ, ಯಲ್ಲಾಲಿಂಗ ಪೂಜಾರಿ, ಬಸವರಾಜ ಚಿನಮಳ್ಳಿ, ಶಿವಾಜಿ ಕಾಶಿ, ನಜೀರ ಅಡಕಿ, ಸಲೀಂ ಸಾಬ್, ಜುಮಣ್ಣ ಪೂಜಾರಿ, ಬಸವರಾಜ ಹೊಸಳ್ಳಿ, ಶ್ರೀನಿವಾಸ ರಡ್ಡಿ ಪಾಲಪ್, ಸಂಜಯ ಬುಳ್ಳಕರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.