ನವೆಂಬರ್ 24 ರಂದು ಕಲಬುರಗಿಯ ಶ್ರೀ ಕೋರಿಸಿದ್ಧೇಶ್ವರ ಶಾಖಾಮಠದ ನವೀಕೃತ ಕಟ್ಟಡ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಪವಾಡಪುರುಷ, ಲೀಲಾಮೂರ್ತಿ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಶಾಖಾಮಠದ ನವೀಕೃತ ಕಟ್ಟಡದ ಉದ್ಘಾಟನೆ, ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ನೂತನ ಶಿಖರಕ್ಕೆ ಕಳಸಾರೋಹಣ ಸಮಾರಂಭ ಇದೇ ನವೆಂಬರ್ 24 ರಂದು ಮಂಗಳವಾರ, ಗೌರಿಹುಣ್ಣಿಮೆಯ ಶುಭದಿನದಂದು ಕಲಬುರಗಿಯ ಕರುಣೇಶ್ವರ ನಗರದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ.
ಸುಮಾರು ಮೂರು ದಶಕಗಳ ಹಿಂದೆ ಕಲಬುರಗಿಯ ಕರುಣೇಶ್ವರ ನಗರದಲ್ಲಿ ಸ್ಥಾಪನೆಯಾದ ನಾಲವಾರದ ಶ್ರೀ ಕೋರಿಸಿದ್ಧೇಶ್ವರ ಶಾಖಾಮಠವು ಈಗ ಮತ್ತೊಮ್ಮೆ ಸುಸಜ್ಜಿತವಾಗಿ ನವೀಕೃತಗೊಂಡಿದೆ. ಕಲಬುರಗಿ ನಗರದ ಕೋರಿಸಿದ್ಧೇಶ್ವರ ಶಿವಯೋಗಿಗಳ ಸದ್ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಿರುವ ಈ ಮಠದಲ್ಲಿ ಈಗ ನೂತನ ಶಿಖರ ನಿರ್ಮಾಣವಾಗಿದ್ದು, ಆ ಶಿಖರಕ್ಕೆ ಕಳಸಾರೋಹಣ ಕೂಡ ಇದೇ ಸಂದರ್ಭದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಈ ಪುಣ್ಯ ಸಮಾರಂಭದಲ್ಲಿ ನಾಡಿನ ಹರಗುರುಚರಮೂರ್ತಿಗಳು, ರಾಜಕೀಯ ಮುಖಂಡರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಗುರುಗಳ ದರ್ಶನ ಮತ್ತು ಆಶೀರ್ವಾದ ಪಡೆದು ಪುನೀತರಾಗಬೇಕೆಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ಮನವಿ ಮಾಡಿದ್ದಾರೆ.
