ಹುಟ್ಟುಹಬ್ಬದ ಆಚರಣೆಯಿಂದ ದೂರವಿರಲು ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಹುಟ್ಟುಹಬ್ಬವೆಂಬುದು ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ ದಿನ. ಆದರೆ, ಹಲವು ವರ್ಷಗಳಿಂದ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂಬುದು ನಿಮಗೆಲ್ಲ ತಿಳಿದಿರುವ ವಿಚಾರ. ಈ ವರ್ಷವೂ ನ.22 ರಂದು ಯಾವುದೇ ರೀತಿಯ ಹುಟ್ಟುಹಬ್ಬದ ಆಚರಣೆಯಿಂದ ದೂರವಿರಲು ನಿರ್ಧರಿಸಿದ್ದೇನೆ ಎಂದು ಗೃಹ ಐಟಿಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನನ್ನ ಹುಟ್ಟುಹಬ್ಬದ ಪ್ರಯುಕ್ತ ಆತ್ಮೀಯರು, ಅಭಿಮಾನಿಗಳು ಹಾಗೂ ಹಿತೈಷಿಗಳು ಯಾವುದೇ ರೀತಿಯ ಸಂಭ್ರಮಾಚರಣೆ, ಕಾರ್ಯಕ್ರಮ ಅಥವಾ ಸಿದ್ಧತೆಗಳನ್ನು ಮಾಡಿಕೊಳ್ಳದಂತೆ ಪ್ರೀತಿಯಿಂದ ಮನವಿ ಮಾಡಿಕೊಂಡಿದ್ದಾರೆ.
ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಹಾರೈಕೆಗಳೇ ನನಗೆ ಎಲ್ಲಕ್ಕಿಂತ ದೊಡ್ಡ ಉಡುಗೊರೆ. ಅದಕ್ಕಿಂತ ಹೆಚ್ಚಿನ ಸಂಭ್ರಮ ಅಥವಾ ಸನ್ಮಾನದ ಅಗತ್ಯ ನನಗಿಲ್ಲ.
ನನ್ನ ಮೇಲಿನ ಅಭಿಮಾನದಿಂದ ಹುಟ್ಟುಹಬ್ಬವನ್ನು ಆಚರಿಸಲೇಬೇಕು ಎಂದು ಬಯಸುವವರು, ಆ ಹಣ ಮತ್ತು ಶ್ರಮವನ್ನು ಬಡವರು, ಶೋಷಿತರು, ಸಂಕಷ್ಟದಲ್ಲಿರುವ ಕುಟುಂಬಗಳು ಹಾಗೂ ವಿದ್ಯಾರ್ಥಿಗಳ ನೆರವಿಗೆ ಬಳಸಿದರೆ ಅದಕ್ಕಿಂತ ದೊಡ್ಡ ಸಂತೋಷ ನನಗೆ ಮತ್ತೊಂದಿಲ್ಲ ಎಂದು ತಿಳಿಸಿದ್ದಾರೆ.
ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಹಾಗೂ ನನ್ನ ಕುಟುಂಬ ಸದಾ ಋಣಿಯಾಗಿರುತ್ತೇವೆ. ನಿಮ್ಮೆಲ್ಲರ ಸಹಕಾರ ಮತ್ತು ಪ್ರೀತಿ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
