ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ, ಕ್ರಿಕೆಟ್ ಪಂದ್ಯಾವಳಿ ಯಶಸ್ವಿ, ವಿಜೇತ ತಂಡಗಳಿಗೆ ಬಹುಮಾನ ವಿತರಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಮುಕ್ತಾರ್ ಪಟೇಲ್ ಅವರು ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಯಾಗಿ ನಡೆಯಿತು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಆಟಗಾರರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪುಟಾಣಿ ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿ, ಸಿಹಿ ಹಂಚುವ ಮೂಲಕ ಸಂತೋಷವನ್ನು ಹಂಚಿಕೊಳ್ಳಲಾಯಿತು.
ಕೇವಲ ಹುಟ್ಟುಹಬ್ಬದ ಆಚರಣೆಗೆ ಸೀಮಿತವಾಗದೆ, ಯುವಕರಲ್ಲಿ ಕ್ರೀಡಾಸ್ಫೂರ್ತಿ, ಸಹೋದರತ್ವ, ಒಗ್ಗಟ್ಟು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ಮೂಡಿಬಂತು.
ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕಾಶಿ, ಶೀಲಾ ಕಾಶಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಗದೀಶ್ ಚವ್ಹಾಣ, ಮಾಜಿ ಸದಸ್ಯ ಜಫರುಲ್ ಹಸನ್, ರಾಜೇಶ್ ಕಾಶಿ, ಬಾಬು ಕಾಶಿ, ಸುಭಾಷ್ ಜಾಧವ್, ರವಿ ಜಾಧವ್ ಖಾಜಾ ಬಾದಲ್, ನಯೀಮ್, ಶೇಖ್ ಬಬ್ಲು, ಖಾಸಿಂ, ನಜೀರ್ ಆಡಕಿ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

